

ಕುಶಾಲನಗರ; ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗಿತ್ತಿದ್ದು, ರಸ್ತೆ ಅಪಘಾತಗಳು ಹೆಚ್ಚಾಗುತ್ತಿದೆ ಎಂದು ತಹಸೀಲ್ದಾರ್ ಟಿ.ಎಂ.ಪ್ರಕಾಶ್ ಹೇಳಿದರು.
ಕೊಡಗು ಜಿಲ್ಲಾ ಪೊಲೀಸ್, ಸೋಮವಾರಪೇಟೆ ಉಪ ವಿಭಾಗ ಮತ್ತು ಸಂಚಾರಿ ಪೊಲೀಸ್ ಠಾಣೆ ವತಿಯಿಂದ ಶುಕ್ರವಾರ ಇಲ್ಲಿನ ಮಾರಮ್ಮ ದೇವಸ್ಥಾನದ ಬಳಿ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿ ಮಾತನಾಡಿದರು. ಅಪಘಾತಗಳಿಗೆ ವಿದ್ಯಾರ್ಥಿಗಳು ಹೆಚ್ಚು ಬಲಿಯಾಗುತ್ತಿದ್ದು, ಜಾಗರೂಕತೆಯಿಂದ ಚಾಲನೆ ಮಾಡಬೇಕಿದೆ. ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು.
ಡಿವೈಎಸ್ಪಿ ಗಂಗಾಧರಪ್ಪ, ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎನ್.ಎಸ್.ಸತೀಶ್, ಸರ್ಕಲ್ ಇನ್ಸ್‌ಪೆಕ್ಟರ್ ಮಹೇಶ್, ಸಂಚಾರಿ ಠಾಣಾಧಿಕಾರಿಗಳಾದ ಗೀತಾ, ಚಂದ್ರಪ್ಪ ಇದ್ದರು.
ಮಾರಮ್ಮ ದೇವಸ್ಥಾನದಿಂದ ಹೊರಟ ಜಾಥಾ ಬಿ.ಎಂ.ರಸ್ತೆಯಲ್ಲಿ ಸಾಗಿ, ರಥ ಬೀದಿ ಮೂಲಕ ಪೊಲೀಸ್ ಠಾಣೆ ಬಳಿ ಅಂತ್ಯಗೊಂಡಿತು. ಸಂಚಾರಿ ನಿಯಮಗಳ ಫಲಕಗಳನ್ನು ಹಿಡಿದು ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಿದರು.