ದಿನಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಿ

dec 01 ss1 vijayavani vitharane
Published on

ಶನಿವಾರಸಂತೆ: ವಿದ್ಯಾರ್ಥಿಗಳು ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಮೂಲಕ ರಾಜ್ಯ, ದೇಶ-ವಿದೇಶಗಳಲ್ಲಿ ನಡೆಯುವ ವಿದ್ಯಮಾನಗಳನ್ನು ತಿಳಿದುಕೊಳ್ಳಬಹುದು ಎಂದು ಕೊಡಗು ಜಿಲ್ಲಾ ವೀರಶೈವ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ದುಂಡಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಿತೀನ್ ಹೇಳಿದರು.


ಕಾವೇರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ನಂ.1 ಕನ್ನಡ ದಿನಪತ್ರಿಕೆ ‘ವಿಜಯವಾಣಿ’ ವಿತರಿಸಿ ಮಾತನಾಡಿದರು.
ಮಕ್ಕಳು ಕೇವಲ ಮೊಬೈಲ್ ಬಳಕೆಯಲ್ಲಿ ಕಾಲಹರಣ ಮಾಡದೆ ದಿನಪತ್ರಿಕೆಗಳನ್ನು ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು. ಪಠ್ಯದ ಜತೆಯಲ್ಲಿ ದಿನಪತ್ರಿಕೆಗಳನ್ನು ಒದುವುದರಿಂದ ಪ್ರತಿನಿತ್ಯ ನಡೆಯುವ ದೇಶ ವಿದೇಶಗಳ ಮಾಹಿತಿ ಸಿಗುತ್ತದೆ. ಇತ್ತೀಚೆಗೆ ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಮೊಬೈಲ್‌ನಲ್ಲಿ ಕಾಲಹರಣ ಮಾಡುತ್ತಿದ್ದಾರೆ. ಇದು ಬದಲಾಗಬೇಕು ಎಂದರು.


ಉಪನ್ಯಾಸಕರಾದ ಅನಂತ್, ಕಾಂತ್‌ರಾಜ್, ಅಶ್ವಥ್, ಪತ್ರಕರ್ತ ದಿನೇಶ್ ಮಾಲಂಬಿ, ಚೆರಿಯಮನೆ ಸುರೇಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net