ದಿನಬಳಕೆ ವಸ್ತು ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

27blh1 jds news
ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ಪದಾಧಿಕಾರಿಗಳು ಬೈಲಹೊಂಗಲದಲ್ಲಿ ಪ್ರತಿಭಟಿಸಿದರು. ಶಂಕರ ಮಾಡಲಗಿ, ದಾನಪ್ಪಗೌಡ ಕುಸಲಾಪುರ ಇತರರು ಇದ್ದರು.
Published on

ಬೈಲಹೊಂಗಲ: ತೈಲ ಬೆಲೆ ಏರಿಕೆ ಖಂಡಿಸಿ ಜೆಡಿಎಸ್ ವತಿಯಿಂದ ಪಟ್ಟಣದಲ್ಲಿ ಭಾನುವಾರ ಪ್ರತಿಭಟಿಸಲಾಯಿತು.
ಪಕ್ಷದ ಜಿಲ್ಲಾಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಡೀಸೆಲ್, ಪೆಟ್ರೋಲ್, ಗ್ಯಾಸ್ ಸೇರಿದಂತೆ ಅಗತ್ಯ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ.

ಕಳಸಾ ಬಂಡೂರಿ ನ್ಯಾಯಾಲಯದಲ್ಲಿ ಇತ್ಯರ್ಥವಾಗಿದ್ದು ಇಲ್ಲಿವರೆಗೂ ಕಾಮಗಾರಿ ಆರಂಭವಾಗಿಲ್ಲ. ಸರ್ಕಾರಕ್ಕೆ ಜನರ ಮೇಲೆ ಕಾಳಜಿ ಇದ್ದರೆ ಜನತೆಯ ಕಲ್ಯಾಣಕ್ಕೆ ಸ್ಪಂದಿಸಬೇಕು. ಕೇಂದ್ರ ಸರ್ಕಾರ ತಕ್ಷಣವೇ ಬೆಲೆ ಏರಿಕೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ತಾಲೂಕು ಘಟಕದ ಅಧ್ಯಕ್ಷ ದಾನಪ್ಪಗೌಡ ಕುಸಲಾಪುರ, ನಗರ ಘಟಕದ ಅಧ್ಯಕ್ಷ ಆನಂದ ಕಾಜಗಾರ, ಕರೊನಾ ಸೋಂಕು ತಗುಲಿ ನಿಧನರಾದ ಪ್ರತಿ ರೈತರ ಕುಟುಂಬಕ್ಕೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ಸುಭಾಷ ಬಾಗೇವಾಡಿ, ರಾಮು ರಜಫೂತ, ಆನಂದ ಪಟಾತ, ಅನಿಲ ಡೊಡವಾಡ, ಸಂತೋಷ ಪಶುಪತಿಮಠ, ಶಿವು ಕುರಬೆಟ್ಟ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net