ದಿಲೀಪಕುಮಾರ ಡೊಂಗರಗೆಗೆ ಪ್ರಶಸ್ತಿ

State Level Award To dilipkumar Dongarge Photo
Published on

ಬೀದರ್: ಇಲ್ಲಿಯ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬ್ರಿಮ್ಸ್)ಯ ವಿದ್ಯುತ್ ತಂತ್ರಜ್ಞ ದಿಲೀಪಕುಮಾರ ಡೊಂಗರಗೆ ಅವರಿಗೆ ಹೈದರಾಬಾದ್ ಕರ್ನಾಟಕ ನಾಗರಿಕರ ವೇದಿಕೆ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ರಾಜ್ಯಮಟ್ಟದ ನೃಪತುಂಗ ಪ್ರಶಸ್ತಿ ದೊರೆತಿದೆ.
ಕಲಬುರಗಿಯ ಕನ್ನಡ ಭವನದಲ್ಲಿ ನಡೆದ ಕಲ್ಯಾಣ ಕರ್ನಾಟಕ ಸಾಂಸ್ಕøತಿಕ ಸಂಭ್ರಮದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ. ಸತೀಶಕುಮಾರ ಹೊಸಮನಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಡೊಂಗರಗೆ ಅವರಿಗೆ ಪ್ರಶಸ್ತಿ ಲಭಿಸಿದೆ. ಡೊಂಗರಗೆ 30 ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರಳ, ಸೌಜನ್ಯತೆ, ಸೇವಾ ನಿμÉ್ಠಗೆ ಹೆಸರಾಗಿದ್ದಾರೆ. ಕೋವಿಡ್ ನಿಯಂತ್ರಣಕ್ಕಾಗಿ ಅವಿರತ ಶ್ರಮಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಗಣ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸಾಹಿತಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net