ದಿಶಾ ಬಿಡುಗಡೆಗೆ ಎಸ್ಎಫ್ಐ ಆಗ್ರಹ

SFI Memo
Published on

ಬೀದರ್: ಪರಿಸರ ಕಾರ್ಯಕರ್ತೆ ದಿಶಾ ರವಿ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಜಿಲ್ಲಾ ಘಟಕ ಆಗ್ರಹಿಸಿದೆ.

ರಾಷ್ಟ್ರಪತಿಗೆ ಬರೆದ ಮನವಿ ಪತ್ರ ನಗರದಲ್ಲಿ ಅಪರ ಜಿಲ್ಲಾಧಿಕಾರಿ ರುದ್ರೇಶ ಘಾಳಿ ಅವರಿಗೆ ಸಲ್ಲಿಸಿ, ಕೇಂದ್ರದ 3 ಕೃಷಿ ಕಾಯ್ದೆ ವಿರುದ್ಧ ನಡೆಸುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿದ ದಿಶಾ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿ ಬಂಧಿಸಿರುವುದು ಖಂಡನೀಯ. ಅಭಿವ್ಯಕ್ತಿ ಸ್ವಾತಂತ್ರೃಕ್ಕೆ ಯಾರೂ ಧಕ್ಕೆ ತರಬಾರದು. ದಿಶಾ ಬಿಡುಗಡೆ ಮಾಡದಿದ್ದಲ್ಲಿ ಹೋರಾಟ ಮಾಡಲಾಗುವುದು ಎಂದು ಅಧ್ಯಕ್ಷ ಅರುಣ ಕೋಡಗೆ, ಪ್ರಮುಖರಾದ ಅಮರ ಗಾದಗಿ, ಅವಿನಾಶ ಪಾಟೀಲ್, ಪ್ರಶಾಂತ ರೊಡ್ಡಾ, ರೋಷನ್ ಮಲ್ಕಾಪುರೆ, ಆರ್ಯಾ ಭಾಂಗೆ, ಮಹಾಂತೇಶ ಕಾಡೆ ಎಚ್ಚರಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net