ದಿಶಾ ಸಮಿತಿ ವರದಿ ಕ್ರಮಕ್ಕೆ ಮುಂದಾದ ಸರ್ಕಾರ

Shivayya Swamy
Published on

ಬೀದರ್: ಜಿಲ್ಲಾ ದಿಶಾ ಸಮಿತಿ ವರದಿ ಆಧರಿಸಿ ರಾಜ್ಯ ಸರ್ಕಾರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ವಿರುದ್ಧ ಕ್ರಮಕ್ಕೆ ಮುಂದಾಗಿದೆ ಎಂದು ಕೇಂದ್ರ ಸರ್ಕಾರದ ರಾಜ್ಯ ಅಭಿವೃದ್ಧಿ, ಸಮನ್ವಯ ಹಾಗೂ ಮೇಲುಸ್ತುವಾರಿ ಸಮಿತಿ ಸದಸ್ಯ ಶಿವಯ್ಯ ಸ್ವಾಮಿ ತಿಳಿಸಿದ್ದಾರೆ.
ಭ್ರಷ್ಟಾಚಾರ ಹಾಗೂ ಸಭೆಗೆ ತಪ್ಪು ಮಾಹಿತಿ ನೀಡಿದ ಬಗ್ಗೆ ಜಿಲ್ಲಾ ದಿಶಾ ಸಮಿತಿಯಿಂದ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಅವರು ವಿಧಾನ ಪರಿಷತ್‍ನಲ್ಲೂ ವಿಷಯ ಪ್ರಸ್ತಾಪಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವ ಆಶ್ವಾಸನೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಸರ್ಕಾರ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಈಗಾಗಲೇ ಬೀದರ್ ಜಿಲ್ಲೆಯ ಅಂದಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ರವೀಂದ್ರ ರತ್ನಾಕರ್ ಅವರನ್ನು ಎತ್ತಂಗಡಿ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net