ದೀಕ್ಷಾ ಭೂಮಿ ಯಾತ್ರೆ ಸಾರ್ಥಕಪಡಿಸಿಕೊಳ್ಳಿ

30KUDLIGI2
Published on

ಕೂಡ್ಲಿಗಿ: ಅಂಬೇಡ್ಕರ್ ಅವರ ಸಮಾನತೆ ತತ್ವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ವಿ.ಕೆ.ನೇತ್ರಾವತಿ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯಿಂದ ನಾಗಪುರದ ಡಾ.ಬಿ.ಆರ್.ಅಂಬೇಡ್ಕರ್ ದೀಕ್ಷಾಭೂಮಿ ಯಾತ್ರೆಗೆ ಪಟ್ಟಣದ ಗಾಂಧಿ ಚಿತಾಭಸ್ಮವಿರುವ ಹುತಾತ್ಮರ ಸ್ಮಾರಕದ ಬಳಿ ಚಾಲನೆ ನೀಡಿ ಮಂಗಳವಾರ ಮಾತನಾಡಿದರು. ಡಾ.ಬಿ.ಆರ್.ಅಂಬೇಡ್ಕರ್ ಆದರ್ಶಗಳನ್ನು ಅಳವಡಿಸಿಕೊಳ್ಳುವ ಮೂಲಕ ದೀಕ್ಷಾಭೂಮಿ ಯಾತ್ರೆಯನ್ನು ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ಡಿವೈಎಸ್ಪಿ ಮಲ್ಲೇಶ ದೊಡ್ಡಮನಿ ಮಾತನಾಡಿ, ಅಂಬೇಡ್ಕರ್ ಅವರ ದೀಕ್ಷಾಭೂಮಿ ನಮ್ಮೆಲ್ಲರಿಗೆ ಪುಣ್ಯ ಕ್ಷೇತ್ರವಾಗಿದ್ದು, ಅಂಬೇಡ್ಕರ್ ಅವರು ನಮಗೆ ಜೀವನ ಕಲ್ಪಿಸಿಕೊಟ್ಟಿದ್ದಾರೆ. ಅಂಬೇಡ್ಕರ್ ಅವರ ಆದರ್ಶಗಳು ಪ್ರೇರಣೆಯಾಗಲಿ ಎಂದು ಹೇಳಿದರು.

ತಾಪಂ ಇಒ ನರಸಪ್ಪ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಎಸ್.ವೆಂಕಟೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಎಸ್. ದುರುಗೇಶ್, ಒನಕೆ ಓಬವ್ವ ಸಂಘದ ರಾಜ್ಯಾಧ್ಯಕ್ಷ ಹಿರೇಕುಂಬಳಗುಂಟೆ ಉಮೇಶ್, ಪ್ರಮುಖರಾದ ಬಿ. ಮಹೇಶ್, ಸಾಲುಮನಿ ರಾಘವೇಂದ್ರ, ಮಂಜುನಾಥ, ದುರುಗೇಶ, ರವಿ, ಸಮಾಜ ಕಲ್ಯಾಣ ಇಲಾಖೆಯ ಕಚೇರಿ ವ್ಯವಸ್ಥಾಪಕ ಎಸ್. ಪಕ್ಕೀರಪ್ಪ, ನಿಲಯ ಪಾಲಕರಾದ ಆರ್.ದುರುಗೇಶ, ಸದಾನಂದಯ್ಯ ಎಚ್.ಎಂ., ಮಹಮ್ಮದ್ ಸೈಯದ್, ಶ್ರೀನಿವಾಸ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net