ದುಂಡಳ್ಳಿ ಗ್ರಾಪಂ ಆಡಳಿತ ಮಂಡಳಿ ಸಭೆ

24ss1gp sabhe
Published on

ಶನಿವಾರಸಂತೆ: ಸಮೀಪದ ದುಂಡಳ್ಳಿ ಗ್ರಾಪಂ ಆಡಳಿತ ಮಂಡಳಿಯ ಸಾಮಾನ್ಯ ಸಭೆ ಗ್ರಾಪಂ ಅಧ್ಯಕ್ಷೆ ಪೂರ್ಣಿಮಾ ಕಿರಣ್ ಅಧ್ಯಕ್ಷತೆಯಲ್ಲಿ ನಡೆಯಿತು.

ಪ್ಲಾಸ್ಟಿಕ್ ಮಾರಾಟ ಹಾಗೂ ಬಳಕೆ ನಿಷೇಧ ಕಡ್ಡಾಯವಾಗಿ ಪಾಲಿಸುವ ಬಗ್ಗೆ ಜನರಿಗೆ ಅರಿವು ಮೂಡಿಸುವುದು, ಪಂಚಾಯಿತಿ ವ್ಯಾಪ್ತಿಯಲ್ಲಿ ಸುಚಿತ್ವ ಕಾಪಾಡುವುದು, ಬೀದಿ ದೀಪ ಅಳವಡಿಸುವುದು, ಕುಡಿಯುವ ನೀರು ಪೂರೈಕೆಯ ಕೊಳವೆ ಸೇರಿದಂತೆ ಇತರೆ ಸಾಮಾಗ್ರಿಗಳನ್ನು ಖರೀದಿಸುವುದು ಸೇರಿದಂತೆ ಗ್ರಾಪಂ ಸರ್ವಾಂಗೀಣ ಅಭಿವೃದ್ಧಿಗೆ ಸಂಬಂಧಿಸಿದಂತೆ ಸದಸ್ಯರು ಚರ್ಚಿಸಿದರು.

ಸಭೆಯಲ್ಲಿ ಗ್ರಾಪಂ ಸದಸ್ಯರಾದ ಡಿ.ಬಿ.ಬೋಜಪ್ಪ, ಸಿ.ಜೆ.ಗಿರೀಶ್, ಮಹಾಂತೇಶ್, ಕಾಂತರಾಜ್, ಎಸ್.ಪಿ.ಭಾಗ್ಯ, ದೇವರಾಜು, ಸತ್ಯವತಿ, ನಂದಿನಿ, ಭವಾನಿ, ಗೋಪಿಕಾ, ಪಿಡಿಒ ರಾಜೇಂದ್ರ ಹಾಗೂ ಗ್ರಾಪಂ ಸಿಬ್ಬಂದಿ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net