ದುಡಿಮೆ ನಿಯಂತ್ರಿಸಲು ಕಾನೂನು ಜಾರಿ

Labour
Published on

ಕಲಬುರಗಿ: ಬಾಲ್ಯಾವಸ್ಥೆ ಮತ್ತು ಕಿಶೋರ ಕಾರ್ಮಿಕ ಮಕ್ಕಳ ದುಡಿಮೆ ನಿಯಂತ್ರಿಸಲು ಹಾಗೂ ನಿಷೇಧಿಸಲು ಕಾನೂನು ಜಾರಿಗೆ ತರಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯೂ ಆದ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಿವಾಸ ನವಲೆ ಹೇಳಿದರು.
ನೂತನ ವಿದ್ಯಾಲಯ ಪದವಿಪೂರ್ವ ಕಾಲೇಜು ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ, ಕಾರ್ಮಿಕ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಸಹಯೋಗದಲ್ಲಿ ಬಾಲ್ಯಾವಸ್ಥೆ ಹಾಗೂ ಕಿಶೋರಾವಸ್ಥೆಯ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ ೧೯೮೬ ತಿದ್ದುಪಡಿ ೨೦೧೬ರ ಕುರಿತು ಕಾನೂನು ಅರಿವು ಜಾಥಾಕ್ಕೆ ಶನಿವಾರ ಚಾಲನೆ ನೀಡಿ ಮಾತನಾಡಿದರು.
ಉಪಕಾರ್ಮಿಕ ಆಯುಕ್ತ ವೆಂಕಟೇಶ ಶಿಂಧಿಹಟ್ಟಿ ಮಾತನಾಡಿ, ರಾಷ್ಟಿçÃಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮತ್ತು ಕರ್ನಾಟಕ ಹೈಕೋರ್ಟ್ ನಿರ್ದೇಶನದ ಮೇರೆಗೆ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಮತ್ತು ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಮರು ವಸತಿ ಕಲ್ಪಿಸಲಾಗುತ್ತಿದೆ. ಅಲ್ಲದೆ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉz್ದÉÃಶದಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದರು.
ಸಹಾಯಕ ಕಾರ್ಮಿಕ ಆಯುಕ್ತ ಡಾ.ಅವಿನಾಶ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಶಿವಶರಣಪ್ಪ ಮುಳೆಗಾಂವ್, ಮಂಜುಳಾ ಪಾಟೀಲ್, ಸತೀಶಕುಮಾರ ಉಮದಿ, ಕೆ.ಎಸ್. ಪ್ರಸನ್ನ, ಶಿವರಾಜ ಪಾಟೀಲ್, ಶರಣಪ್ಪ ಹಳಿಮನಿ, ಸಂತೋಷ ಕುಲಕರ್ಣಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net