

ಹೂವಿನಹಡಗಲಿ: ಮುದೇನೂರು ಗ್ರಾಮದಲ್ಲಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದಕ್ಕಾಗಿ ಲಕ್ಷಾಂತರ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ಮಾಡಲಾಗಿದೆ.
ಆದರೆ, ಘಟಕ ನಿರ್ಮಾಣದ ಕೆಲವು ತಿಂಗಳಲ್ಲೇ ಕೆಟ್ಟಿದೆ. ಗ್ರಾಮದಲ್ಲಿ ಸುಮಾರು ಎರಡು ಸಾವಿರ ಜನ ವಾಸವಾಗಿದ್ದು, ಒಂದೇ ಘಟಕದಿಂದ ಕುಡಿವ ನೀರು ಪೂರೈಕೆಯಾಗುತ್ತಿತ್ತು. ಗ್ರಾಮದ ಒಂದನೇ ಅಂಗನವಾಡಿ ಕೇಂದ್ರದ ಸಮೀಪವಿರುವ ಈ ಶುದ್ಧ ನೀರಿನ ಘಟಕ ಕೆಟ್ಟು ಎರಡು ವರ್ಷಗಳು ಕಳೆದರೂ ದುರಸ್ತಿ ಮಾಡಿಸಿಲ್ಲ. ಈ ಘಟಕ ಸುಮಾರು ಮೂರು ಸಾವಿರ ಲೀಟರ್ ಸಾಮರ್ಥ್ಯ ಹೊಂದಿದೆ. ದುರಸ್ತಿಗೆ ಅಧಿಕಾರಿಗಳು ನಿರ್ಲಕ್ಷೃ ವಹಿಸಿದ್ದಾರೆ.