ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವ

CTD Durgamma Devi
Published on

ಚಿತ್ರದುರ್ಗ: ತಾಲೂಕಿನ ಬಳಿಕಟ್ಟೆ ಗ್ರಾಮದ ಗ್ರಾಮದೇವತೆ ದುರ್ಗಮ್ಮ ದೇವಿ ಜಾತ್ರಾ ಮಹೋತ್ಸವ ನೂರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಜಾತ್ರೆ ಪ್ರಯುಕ್ತ ದೇವಿ ಉತ್ಸವ ಮೂರ್ತಿಯನ್ನು ಉಚ್ಛಾಯದಲ್ಲಿ ಪ್ರತಿಷ್ಠಾಪಿಸಿದ ನಂತರ ವಿವಿಧ ಬಗೆಯ ಹೂವಿನ ಹಾರಗಳಿಂದ ಸುಂದರವಾಗಿ ಅಲಂಕರಿಸಲಾಗಿತ್ತು.

ದೇಗುಲದ ಆವರಣಕ್ಕೆ ತಳಿರು ತೋರಣಗಳನ್ನು ಕಟ್ಟಲಾಗಿತ್ತು. ದೇವಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ ಸೇವೆ ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನೆರವೇರಿತು. ಭಕ್ತರಿಂದ ಉಧೋ ಉಧೋ ಹಷೋದ್ಗಾರ ಮೊಳಗಿತು.

ನಂತರ ದೇವಿ ಉತ್ಸವ ಮೂರ್ತಿಯನ್ನು ದೇಗುಲಕ್ಕೆ ಕರೆತರಲಾಯಿತು. ಉರುಮೆ ಇನ್ನಿತರೆ ಕಲಾತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net