ದುರ್ಗಾಪರಮೇಶ್ವರಿ ದೇವತಾ ಬ್ರಹ್ಮಕಲಶೋತ್ಸವ

27Kush08
Published on


ಕುಶಾಲನಗರ: ಸಮೀಪದ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿಜಯನಗರದ ಗ್ರಾಮ ದೇವತೆ ದುರ್ಗಾಪರಮೇಶ್ವರಿ ದೇವಾಲಯದ ಹತ್ತನೇ ವರ್ಷದ ಬ್ರಹ್ಮಕಲಶೋತ್ಸವ ಗುರುವಾರ ಶ್ರದ್ಧಾಭಕ್ತಿಯಿಂದ ನೆರವೇರಿತು.


ದೇವತಾ ಮೂರ್ತಿಗೆ ಬೆಳಗ್ಗೆ ವಿವಿಧ ಅಭಿಷೇಕಗಳು ನೆರವೇರಿದವು. ಬಳಿಕ ದೇವತಾ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಿ ಪೂಜಿಸಿದ ನಂತರ ಅಪಾರ ಭಕ್ತರ ಸಮ್ಮುಖದಲ್ಲಿ ಮಹಾಮಂಗಳಾರತಿ ನೆರವೇರಿಸಲಾಯಿತು.


ಇದಕ್ಕೂ ಮುನ್ನ ದೇವಾಲಯದ ಪ್ರಾಂಗಣದಲ್ಲಿ ಅರ್ಚಕ ಪರಮೇಶ್ವರ ಭಟ್ಟರ ನೇತೃತ್ವದಲ್ಲಿ ವಿವಿಧ ಹೋಮ-ಹವನ, ಪೂಜಾದಿಗಳು ನೆರವೇರಿದವು. ಬ್ರಹ್ಮಕಲಶೋತ್ಸವದ ಅಂಗವಾಗಿ ನೆರೆದಿದ್ದ ಭಕ್ತ ಸಮೂಹಕ್ಕೆ ಅನ್ನ ಸಂತರ್ಪಣೆಯೂ ಏರ್ಪಡಿಸಲಾಗಿತ್ತು.


ಕೂಡಿಗೆ, ಕೂಡುಮಂಗಳೂರು, ವಿಜಯನಗರ ಸೇರಿದಂತೆ ಸುತ್ತಲಿನ ಗ್ರಾಮಗಳ ಭಕ್ತರು ಪೂಜೋತ್ಸವದಲ್ಲಿ ಪಾಲ್ಗೊಂಡಿದ್ದರು.

ದೇವಾಲಯದ ಅರ್ಚಕ ಯೋಗೇಶ್ವರ ಭಟ್, ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಣ್ಣೇಗೌಡ, ಕಾರ್ಯದರ್ಶಿ ಹರೀಶ್, ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರಾದ ಗಿರೀಶ, ಜ್ಯೋತಿ ಮಂಜುನಾಥ್, ಈರಯ್ಯ, ಗ್ರಾಮಸ್ಥರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net