

ವಿಜಯವಾಣಿ ಸುದ್ದಿಜಾಲ ತೂಬಗೆರೆ
ಕರೊನಾ ನಂತರ ಶೇ.30 ಜನತೆ ಮಾನಸಿಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂದು ಮನೋವೈದ್ಯ, ಪದ್ಮಶ್ರೀ ಪುರಸ್ಕೃತ ಡಾ.ಸಿ.ಆರ್.ಚಂದ್ರಶೇಖರ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ಹೋಬಳಿ ದೊಡ್ಡರಾಯಪ್ಪನಹಳ್ಳಿಯಲ್ಲಿ ನವೋದಯ ಚಾರಿಟಬಲ್ ಟ್ರಸ್ಟ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಸುರಾನಾ ಕಾಲೇಜು ಸಹಯೋಗದಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ನವೋದಯ ಗ್ರಾಮೀಣ ಆರೋಗ್ಯ ಮತ್ತು ಪರಿಸರ ಅಧ್ಯಯನ ಕೇಂದ್ರ ಉದ್ಘಾಟಿಸಿ ಮಾತನಾಡಿದರು.
ಇತ್ತೀಚಿನ ಸಮೀಕ್ಷೆ ಪ್ರಕಾರ ಮನುಷ್ಯ ಅತಿಯಾದ ಒತ್ತಡಗಳಿಗೆ ಒಳಗಾಗಿ ಮಾನಸಿಕವಾಗಿ ಕುಗ್ಗುತ್ತಿದ್ದಾನೆ. ಯುವಕರು ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಇದರಿಂದ ಹೊರ ಬರಲು ಯೋಗ, ಧ್ಯಾನ, ವ್ಯಾಯಾಮ, ಒಳ್ಳೆಯ ಚಿಂತನೆಗಳನ್ನು ಮಾಡಬೇಕು ಎಂದರು. ಅತಿಯಾದ ಆಸೆ, ಚಿಂತೆಯೂ ಮಾನವನ ಆಕಾಂಕ್ಷೆಗಳಿಂದಲೂ ಖಿನ್ನತೆಗಳಿಗೆ ಒಳಗಾಗುತ್ತಿದ್ದಾರೆ. ಈ ಗ್ರಾಮೀಣ ಪ್ರದೇಶದಲ್ಲಿ ನವೋದಯ ಚಾರಿಟಬಲ್ ಅಧ್ಯಕ್ಷ ಚೇತನ್ ಮತ್ತು ಅವರ ತಂಡ ಗ್ರಾಮೀಣ ಆರೋಗ್ಯ ಅಧ್ಯಯನ ಕೇಂದ್ರವನ್ನು ತೆರೆದಿರುವುದು ಮಾದರಿ ವಿಷಯ ಎಂದರು.
ತೂಬಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಡಾ.ಪೂರ್ಣಿಮಾ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಯುವಕರು ಮಿತ್ರರ ಒತ್ತಡಗಳಿಗೆ ಒಳಗಾಗಿ ಸಾಕಷ್ಟು ಮದ್ಯಪಾನ, ಧೂಮಪಾನಗಳಂತ ದುಶ್ಚಟಗಳಿಗೆ ದಾಸರಾಗುತ್ತಿದ್ದಾರೆ. ಈಗಿನ ಸ್ಪರ್ಧಾ ಜಗತ್ತಿನಲ್ಲಿ ಸಣ್ಣ ಸಣ್ಣ ವಿಚಾರಗಳಿಗೂ ಯುವಕ- ಯುವತಿಯರು ಅತ್ಮಹತ್ಯೆಯಂತಹ ಕೆಲಸಗಳಿಗೆ ಕೈ ಹಾಕುತ್ತಿರುವುದು ವಿಷಾದಕರ ಸಂಗತಿ ಎಂದರು.
ಅರಣ್ಯ ಇಲಾಖೆ ಉಪ ವಲಯ ಅರಣ್ಯಧಿಕಾರಿ ಚಂದ್ರಶೇಖರ್, ಎಂಪಿಸಿಎಸ್ ಅಧ್ಯಕ್ಷ
ಚೊಕ್ಕರೆಡ್ಡಿ, ನವೋದಯ ಚಾರಿಟೇಬಲ್ ಟ್ರಸ್ಟ್ ತಂಡದ ಲೋಹಿತ್, ವೈ.ಟಿ.ಕಾರ್ತಿಕ್ ಗೌಡ, ಮಂಜುನಾಥ್ ಇದ್ದರು.