

ಬಾಗಲಕೋಟೆ: ಇದು ಯುವಕರು ದುಶ್ಚಟಗಳಿಗೆ ಬಲಿಯಾಗಿ ಸುಂದರ ಜೀವನ ಹಾಳು ಮಾಡಿಕೊಳ್ಳುತ್ತಿರುವುದು ಖೇದಕರ ಸಂಗತಿ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶೆ ಹೇಮಲತಾ ಹುಲ್ಲೂರ ಹೇಳಿದರು.
ನವನಗರದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಏಕತಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಈ ನೆಲದ ಸಂಸ್ಕೃತಿಯನ್ನು ನಾವು ಮರೆಯಬಾರದು. ಇಂದಿನ ಯುವ ಪೀಳಿಗೆ ಮೊಬೈಲ್ ಗಳಿಗೆ ಮಾರು ಹೋಗಿದ್ದಾರೆ. ಇದರಿಂದ ನಮ್ಮ ಸಂಸ್ಕೃತಿ ಮೇಲೆ ಅಡ್ಡ ಪರಿಣಾಮ ಬೀರುತ್ತಿದೆ. ಅಲ್ಲದೆ ದುಶ್ಚಟಗಳಿಗೆ ಬಲಿಯಾಗಿ ಜೀವನವನ್ನು ಹಾಳು ಮಾಡಿಕೊಳ್ಳುತ್ತಿರವುದು ಖೇದಕರ ಸಂಗತಿ. ಆಟ ಪಾಠಗಳೊಂದಿಗೆ ಹೆಚ್ಚಾಗಿ ಸಾಂಸ್ಕೃತಿಕ ಕಲೆಗಳಿಗೆ ಒತ್ತು ನೀಡಿ ಸಮಾಜಮುಖಿಯಾಗಿ ಬದುಕಬೇಕು ಎಂದು ಕಿವಿಮಾತು ಹೇಳಿದರು.
ಡಾ.ಸಿದ್ದರಾಮಯ್ಯ ಮಠಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಲತಾ ಎನ್ ಇದ್ದರು.