ದುಷ್ಕರ್ಮಿಗಳಿಂದ 20ಕ್ಕೂ ಹೆಚ್ಚು ಅಡಿಕೆ ಗಿಡಗಳ ನಾಶ

20ark-3 - Copy
Published on

ಅರಕಲಗೂಡು: ಯಾರೋ ಕಿಡಿಗೇಡಿಗಳು ವ್ಯಕ್ತಿಯೊಬ್ಬರಿಗೆ ಸೇರಿದ ಅಡಕೆ ಗಿಡಗಳನ್ನು ಕತ್ತರಿಸಿ ಹಾಕಿ ದುಷ್ಕೃತ್ಯ ಮೆರೆದಿರುವ ಘಟನೆ ತಾಲೂಕಿನ ಕಳ್ಳಿಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.


ಕಳ್ಳಿಮುದ್ದನಹಳ್ಳಿ ಗ್ರಾಮದ ರೈತ ಬೈರೇಗೌಡ, ಅವರು ಕಳೆದ ನಾಲ್ಕು ವರ್ಷಗಳಿಂದ ಬಹಳ ಶ್ರಮ ವಹಿಸಿ ಅಡಕೆ ಗಿಡ ಬೆಳೆಸಿದ್ದರು. ಎಲ್ಲ ಗಿಡಗಳಿಗೂ ಹನಿ ನೀರಾವರಿ ವ್ಯವಸ್ಥೆ ಮಾಡಿದ್ದರು. ಆದರೆ, ಬುಧವಾರ ರಾತ್ರಿ ಸುಮಾರು 20ಕ್ಕೂ ಹೆಚ್ಚು ಅಡಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ನಾಶ ಮಾಡಿದ್ದಾರೆ. ಇದರಿಂದ ಭವಿಷ್ಯದಲ್ಲಿ ಉತ್ತಮ ಫಸಲಿನ ನಿರೀಕ್ಷೆ ಹೊಂದಿದ್ದ ರೈತನಿಗೆ ಅಘಾತವಾಗಿದೆ.


ಅಡಕೆ ಗಿಡಗಳನ್ನು ನೆಟ್ಟು ನಾಲ್ಕು ವರ್ಷ ಕಳೆದಿದೆ. ಮಕ್ಕಳಂತೆ ಬೆಳೆಸಿದ್ದ ಅಡಕೆ ಗಿಡಗಳನ್ನು ಯಾರೋ ಏಕಾಏಕಿ ಕತ್ತರಿಸಿ ವಿಕೃತಿ ಮೆರೆದಿದ್ದಾರೆ. ಈ ಕೃತ್ಯದಿಂದ ತೀವ್ರ ನೋವಾಗಿದೆ ಎಂದು ರೈತ ಬೈರೆಗೌಡ ಕಣ್ಣೀರಿಟ್ಟಿದ್ದಾರೆ. ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net