

ಚಿತ್ರದುರ್ಗ:ಲೋಕಾಯುಕ್ತ ಚಿತ್ರದುರ್ಗ ವಿಭಾಗದ ಅಧಿಕಾರಿಗಳು ಜಿಲ್ಲಾ ವ್ಯಾಪ್ತಿಯಲ್ಲಿ ಜೂ. 21ರಿಂದ 23ರವರೆಗೆ ಸಾರ್ವಜನಿಕರಿಂದ ದೂರು, ಅಹವಾಲು ನಿಗದಿತ ಅರ್ಜಿ ನಮೂನೆಯಲ್ಲಿ ಸ್ವೀಕರಿಸಲಿದ್ದಾರೆ.
ಸರ್ಕಾರಿ ಕಚೇರಿಗಳಲ್ಲಿ ಕೆಲಸಗಳನ್ನು ಮಾಡಿಕೊಡಲು ಲಂಚಕ್ಕೆ ಬೇಡಿಕೆ, ಸಾರ್ವಜನಿಕ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ, ಕರ್ತವ್ಯ ನಿರ್ವಹಣೆಯಲ್ಲಿ ತಾರತಮ್ಯ ಸೇರಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಲೋಕಾಯುಕ್ತ ಅಧಿಕಾರಿಗಳ ಮೂಲಕ ನಮೂನೆ 12ರಲ್ಲಿ ಸಲ್ಲಿಸಬಹುದಾಗಿದೆ.
21-ಮೊಳಕಾಲ್ಮೂರಿನಲ್ಲಿ ಲೋಕಾಯುಕ್ತ ಡಿವೈಎಸ್‌ಪಿ, ಚಳ್ಳಕೆರೆಯಲ್ಲಿ ಪೊಲೀಸ್ ನಿರೀಕ್ಷಕರು, 22-ಚಿತ್ರದುರ್ಗದಲ್ಲಿ ಲೋಕಾಯುಕ್ತ ಎಸ್‌ಪಿ, ಡಿವೈಎಸ್‌ಪಿ, ಹೊಸದುರ್ಗದಲ್ಲಿ ಪೊಲೀಸ್ ನಿರೀಕ್ಷಕರು, 23ರಂದು ಹಿರಿಯೂರು ಮತ್ತು ಹೊಳಲ್ಕೆರೆಯಲ್ಲಿ ಪೊಲೀಸ್ ನಿರೀಕ್ಷಕರು ಆಯಾ ತಾಲೂಕು ಕಚೇರಿಯಲ್ಲಿ ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರವರೆಗೆ ದೂರು, ಅಹವಾಲು ಸ್ವೀಕರಿಸಲಿದ್ದಾರೆ.