

ಬೀದರ್: ಜನಸ್ಪಂದನ ಕಾರ್ಯಕ್ರಮಕ್ಕೆ ಹೆಚ್ಚಿನ ಜನರು ಬಂದಿಲ್ಲ ಎಂದರೆ ಜಿಲ್ಲಾಡಳಿತ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಉತ್ತಮ ಸೇವೆ ಸಿಗುತ್ತಿದೆ ಎಂದರ್ಥ. ಜನ ಹೆಚ್ಚಿನ ಸಂಖ್ಯೆಯಲ್ಲಿ ಬಂದು ಹೆಚ್ಚಿನ ಸಮಸ್ಯೆಗಳನ್ನು ತಂದರೆ ಆಡಳಿತದಲ್ಲಿ ವೈಫಲ್ಯವಿದೆ ಎಂದಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಸಹಯೋಗದಡಿ ಇಲ್ಲಿನ ಪೂಜ್ಯ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆ ಆಲಿಸುವ ಜನಸ್ಪಂದನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಹಿಂದೆ ರಾಜ-ಮಹಾರಾಜರ ಕಾಲದಲ್ಲಿ ದೊರೆತನಕ ದೂರು ಒಯ್ಯುತ್ತಿದ್ದರು. ಈಗ ಮುಖ್ಯಮಂತ್ರಿಗಳ ಜನತಾದರ್ಶನಕ್ಕೆ ಹೋಗುತ್ತಾರೆ. ಯಾವ ಕಾರಣಕ್ಕೂ ಗಡಿ ಜಿಲ್ಲೆ ಬೀದರ್ ಜನರು 700 ಕಿಮೀ ದೂರದ ಬೆಂಗಳೂರಿಗೆ ಹೋಗಿ ದೂರು ನೀಡದಂತೆ ಉತ್ತಮವಾಗಿ ಕೆಲಸ ಮಾಡಬೇಕೆಂದು ಅಕಾರಿಗಳಿಗೆ ಕಿವಿಮಾತು ಹೇಳಿದರು.
ಇಂದು ಜನಸಂಖ್ಯೆ ಹೆಚ್ಚಾಗಿದೆ. ಸಮಸ್ಯೆಗಳೂ ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಸುಮಾರು 15 ಲಕ್ಷ ಜನರಿದ್ದು, ವೈಯಕ್ತಿಕ ಮತ್ತು ಸಾಮೂಹಿಕ ಸಮಸ್ಯೆಗಳೂ ಇರುತ್ತವೆ. ಈ ನಿಟ್ಟಿನಲ್ಲಿ ಜನರು ಸಕರ್ಾರಿ ಕಚೇರಿಗಳಿಗೆ ಸೇವೆ ಪಡೆಯಲು ಬಂದಾಗ ಮಾನವೀಯ ನೆಲೆಗಟ್ಟಿನಲ್ಲಿ ಅಕಾರಿ ಮತ್ತು ಸಿಬ್ಬಂದಿ ಕಾರ್ಯನಿರ್ವಹಿಸಬೇಕು. ಸಕರ್ಾರಿ ನೌಕರಿ ತಮಗೆ ಜನಸೇವೆ ಮಾಡಲು ದೊರೆತಿರುವ ಅವಕಾಶ ಎಂದು ತಿಳಿದು ಜನರಿಗೆ ಕಾನೂನಿನ ಚೌಕಟ್ಟು ಮತ್ತು ತಮ್ಮ ಇತಿ-ಮಿತಿಯಲ್ಲಿ ನಿಯಮಬದ್ಧವಾಗಿ ಭ್ರಷ್ಟಾಚಾರಮುಕ್ತ ಸೇವೆ ಸಲ್ಲಿಸಬೇಕು ಎಂದು ಸೂಚಿಸಿದರು.
ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಸುಮಾರು 40 ಕೌಂಟರ್ ತೆರೆಯಲಾಗಿದೆ. ಈ ಎಲ್ಲ ಕೌಂಟರ್ಗಳಲ್ಲಿ ಆಯಾ ಇಲಾಖೆಗೆ ಸಂಬಂಧಿಸಿದ ಸಮಸ್ಯೆ ಆಲಿಸಿ, ಅಹವಾಲು ಸ್ವೀಕರಿಸಿ ಪ್ರತಿಯೊಬ್ಬರಿಗೂ ಒಂದೊಂದು ದೂರು ಸಂಖ್ಯೆ ನೀಡಿ ಆದ್ಯತೆ ಮೇರೆಗೆ ಸ್ಪಂದಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ನಮ್ಮ ಸಕರ್ಾರ ನುಡಿದಂತೆ ನಡೆಯುತ್ತಿದ್ದು, ಐದೂ ಗ್ಯಾರಂಟಿಗಳನ್ನು ಜಾರಿಗೆ ತರುತ್ತಿದೆ. ಈ ಯೋಜನೆಗಳ ಲಾಭ ಪ್ರತಿಯೊಬ್ಬ ದುರ್ಬಲ, ವಂಚಿತರಿಗೂ ದೊರಕಬೇಕು. ಯಾವುದೇ ಒಬ್ಬ ವ್ಯಕ್ತಿ ಗ್ಯಾರಂಟಿಗಳ ಫಲ ಸಿಗದೆ ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಗ್ಯಾರಂಟಿ ಪ್ರಯೋಜನ ಪಡೆಯುವಲ್ಲಿ ಇರುವ ತೊಡಕುಗಳನ್ನು ನಿವಾರಿಸುವಂತೆ ಸೂಚಿಸಿದರು.
ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಮಾತನಾಡಿದರು. ಜಿಲ್ಲಾಕಾರಿ ಗೋವಿಂದರಡ್ಡಿ, ಜಿಪಂ ಸಿಇಒ ಶಿಲ್ಪಾ ಎಂ., ಎಸ್ಪಿ ಚನ್ನಬಸವಣ್ಣ ಲಂಗೋಟಿ, ಅರಣ್ಯ ಉಪ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ., ಅಪರ ಜಿಲ್ಲಾಕಾರಿ ಶಿವಕುಮಾರ ಶೀಲವಂತ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆ ಪ್ರಮುಖರು ಇದ್ದರು.
301 ಅಜರ್ಿ ಸ್ವೀಕಾರ: ಇಂದಿನ ಜನಸ್ಪಂದನ ಕಾರ್ಯಕ್ರಮದಲ್ಲಿ ಬಸವಕಲ್ಯಾಣ, ಭಾಲ್ಕಿ, ಔರಾದ್, ಹುಮನಾಬಾದ್ ಸೇರಿ ವಿವಿಧ ತಾಲೂಕುಗಳಿಂದ ಸುಮಾರು ಜನರು ಕುಂದು ಕೊರತೆಗಳನ್ನು ಗಮನಕ್ಕೆ ತಂದರು. ವಿವಿಧ ಇಲಾಖೆ ಸ್ಟಾಲ್ಗಳಲ್ಲಿ 161 ಅಜರ್ಿ, ನೇರವಾಗಿ ವೇದಿಕೆ ಮೇಲೆ 140 ಸೇರಿ 301 ಅಜರ್ಿಗಳು ಬಂದಿವೆ. ಇನ್ನಷ್ಟು ಹೆಚ್ಚಿನ ರೀತಿಯಲ್ಲಿ ಅಜರ್ಿ ಬರಬೇಕಿತ್ತು. ಅಧಿಕಾರಿಗಳು ಅಲ್ಪ ಕಾಲದಲ್ಲೇ ಜನಸ್ಪಂದನ ಕಾರ್ಯದಲ್ಲಿ ಚುರುಕಾಗಿ ಕೆಲಸ ನಿರ್ವಹಿಸಿದ್ದಾರೆ. ಈ ಎಲ್ಲ ಅಜರ್ಿಗಳನ್ನು ವಾರದಲ್ಲಿ ಅಧಿಕಾರಿಗಳೊಂದಿಗೆ ಕುಳಿತು ಕಾನೂನು ರೀತಿಯಲ್ಲಿ ಪರಿಹಾರ ನೀಡಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಹೇಳಿದರು.