ದೃಢ ನಿರ್ಧಾರದಿಂದ ಸಾಧನೆ ಸಾಧ್ಯ

bkt-16-3
ಬಾಗಲಕೋಟೆ ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಈಚೆಗೆ ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ೨೦೨೩-೨೪ ನೇ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಎಸ್, ಸೂಳಿಭಾವಿ ಸಸಿಗೆ ನೀರುಣಿಸಿದರು.
Published on

ಬಾಗಲಕೋಟೆ: ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ದೃಢವಾದ ನಿರ್ಧಾರ ಅವಿರತ ಪ್ರಯತ್ನಗಳೇ ತಳಹದಿ ಡಾ.ಅರುಣ ವ್ಹಿ. ಹೂಲಿ ಹೇಳಿದರು.

ನಗರದ ಬಿವಿವಿ ಸಂಘದ ನೂತನ ಸಭಾಭವನದಲ್ಲಿ ಈಚೆಗೆ ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ೨೦೨೩-೨೪ ನೇ ಶೈಕ್ಷಣಿಕ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಅತ್ಯಂತ ಅವಶ್ಯಕ ಕ್ರೀಡೆ ವಿದ್ಯಾರ್ಥಿಗಳನ್ನು ಸದೃಢ ಕಾಯವಂತರನ್ನಾಗಿಸಿದರೆ ಸಂಸ್ಕೃತಿ ವಿದ್ಯಾರ್ಥಿಗಳನ್ನು ಮಾನಸಿಕ ಬಲಕ ಹೆಚ್ಚಿಸುತ್ತದೆ. ಇವೆರಡು ವಿದ್ಯಾರ್ಥಿಗಳ ಆತ್ಮಬಲ ಗಟ್ಟಿಗೊಳಿಸುತ್ತದೆ ಎಂದರು.

ಬಿವಿವಿ ಸಂಘದ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಗುರುಬಸವ ಎಸ್, ಸೂಳಿಭಾವಿ ಮಾತನಾಡಿ, ಈ ಪದವಿ ಪೂರ್ವ ಹಂತ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಅತ್ಯಂತ ಪ್ರಮುಖವಾದದ್ದು, ಈ ಕಾಲಘಟ್ಟದಲ್ಲಿ ಸದಾ ಜಾಗೃತರಾಗಿದ್ದು, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಮಹಾವಿದ್ಯಾಲಯದ ಪದವಿ ಪೂರ್ವ ವಿಭಾಗದ ಪ್ರಾಚಾರ್ಯ ಡಾ.ಎನ್.ಎಚ್.ಬೇವಿನಹಳ್ಳಿ, ಪದವಿ ವಿಭಾಗದ ಪ್ರಾಚಾರ್ಯ ಡಾ.ಎಸ್.ಎಂ.ಗಾಂವಕರ, ದೈಹಿಕ ಶಿಕ್ಷಣ ನಿರ್ದೇಶಕರಾದ ಬಿ.ಎಸ್.ಲೋಕಾಪುರ, ಸಾಂಸ್ಕೃತಿಕ ವಿಭಾಗದ ಕಾರ್ಯಧ್ಯಕ್ಷ ಎ.ಎ.ಬಾಗಲಕೋಟ ಉಪಸ್ಥಿತರಿದರು. ಎಸ್.ಎಂ.ತಿಪ್ಪನ್ನವರ ಪರಿಚಯಿಸಿದರು. ಗೀತಾ ಎಚ್.ಜಿಗಳೂರ ನಿರೂಪಿಸದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net