ದೇಗುಲ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವೆ

25-pnp 1
ಪಾಂಡವಪುರ ಪಟ್ಟಣದ ವರಸಿದ್ದಿ ವಿನಾಯಕ ದೇವಸ್ಥಾನ ಸಮಿತಿ ವತಿಯಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ವೆಂಕಟೇಶ್ ಮೊದಲಿಯಾರ್, ದೀಪು, ಚಂದ್ರೇಗೌಡ, ಪುಟ್ಟರಾಜು ಇದ್ದರು.
Published on

ಪಾಂಡವಪುರ: ಪಟ್ಟಣದ ವಿ.ಸಿ. ಕಾಲನಿಯ ವರಸಿದ್ಧಿ ವಿನಾಯಕ ಟ್ರಸ್ಟ್ ವತಿಯಿಂದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಭಾನುವಾರ ಸನ್ಮಾನಿಸಲಾಯಿತು.

ದೇವಸ್ಥಾನದ ಅಭಿವೃದ್ಧಿಗೆ ಈ ಹಿಂದಿನ ಸರ್ಕಾರದಲ್ಲಿ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದ ಸಾ.ರಾ.ಮಹೇಶ್ ಅವರು 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದ್ದರು. ನಂತರದಲ್ಲಿ ಸರ್ಕಾರ ಬದಲಾಗುವ ಜತೆಗೆ ಕೋವಿಡ್ ಮಹಾಮಾರಿ ವಕ್ಕರಿಸಿದ ಕಾರಣ ಸರ್ಕಾರ ಅನುದಾನ ಬಿಡುಗಡೆಗೆ ತಡ್ಡೆಯೊಡ್ಡಿತು. ಹೀಗಾಗಿ ಮೀಸಲಿರುವ ಅನುದಾನವನ್ನು ಬಿಡುಗಡೆಗೊಳಿಸುವ ಜತೆಗೆ ದೇವಸ್ಥಾನ ಎದುರಿನಲ್ಲಿರುವ ನೀರಾವರಿ ಇಲಾಖೆಗೆ ಸೇರಿದ ಜಾಗದಲ್ಲಿ ಸಮುದಾಯ ಭವನ ನಿರ್ಮಾಣ ಮಾಡಿ ಅದರಲ್ಲಿ ಬರುವ ಆದಾಯವನ್ನು ದೇವಸ್ಥಾನದ ಅಭಿವೃದ್ಧಿಗೆ ಬಳಿಸಿಕೊಳ್ಳಲು ಇಲಾಖೆಯಿಂದ ಅನುಮತಿ ಕೊಡಿಸುವಂತೆ ದೇವಸ್ಥಾನ ಟ್ರಸ್ಟ್‌ನ ಪದಾಧಿಕಾರಿಗಳು ಶಾಸಕರಿಗೆ ಮನವಿ ಸಲ್ಲಿಸಿದರು.

ಗೌರವ ಸ್ವೀಕರಿಸಿದ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ದೇವಸ್ಥಾನ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು. ಸಮುದಾಯ ಭವನ ನಿರ್ಮಾಣಕ್ಕೆ ಸಂಬಂಧಿಸಿದಂತೆ ನೀರಾವರಿ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ಅಗತ್ಯ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ದೇವಸ್ಥಾನ ಸಮಿತಿ ಅಧ್ಯಕ್ಷ ನಾರಾಯಣಸ್ವಾಮಿ, ಗೌರವಾಧ್ಯಕ್ಷ ಡಾ.ಸಿ.ಎ.ಅರವಿಂದ್, ಉಪಾಧ್ಯಕ್ಷ ಚಂದ್ರೇಗೌಡ, ಕಾರ್ಯದರ್ಶಿ ರವಿ, ಖಜಾಂಚಿ ಟಿ.ರಾಜಣ್ಣ, ನಿರ್ದೇಶಕರಾದ ಎನ್.ಸೋಮೇಗೌಡ, ಸಿದ್ದಪ್ಪಾಜಿ, ಬಿ.ಎಂ.ಮಹೇಂದ್ರ, ಜಿ.ಪಿ.ಸಂತೋಷ್, ದೀಪು, ವೆಂಕಟೇಶ್ ಮೊದಲಿಯರ್, ನಿವೃತ್ತ ಪ್ರಾಂಶುಪಾಲ ಎನ್.ಟಿ.ರಂಗರಾವ್, ಉದ್ಯಮಿ ಪುಟ್ಟರಾಜು ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net