ದೇಗುಲ ನಿರ್ಮಾಣಕ್ಕೆ ಅನುದಾನ

Minister
Published on

ಚಿತ್ರದುರ್ಗ: ತಾಲೂಕಿನ ಸೊಂಡೇಕೆರೆಯ ಗ್ರಾಮದ ಶಕ್ತಿದೇವತೆ ಕೆಂಚಾಂಬ ದೇವಿಯ ನೂತನ ದೇಗುಲವನ್ನು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.

ಶನಿವಾರ ರಾತ್ರಿ ಗ್ರಾಮಕ್ಕೆ ಭೇಟಿ ನೀಡಿದ್ದ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಬಳಿ ದೇಗುಲ ನಿರ್ಮಾಣ ಕಾರ್ಯಕ್ಕೆ ಅನುದಾನ ಮಂಜೂರು ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿ 15 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸುವ ಭರವಸೆಯನ್ನು ಸಚಿವರು ನೀಡಿದ್ದಾರೆ.

ಇನ್ನೂ ಗ್ರಾಮಸ್ಥರಿಂದ ಅನೇಕ ಅರ್ಜಿಗಳನ್ನು ಸ್ವೀಕರಿಸಿದ ಸುಧಾಕರ್, ದೊಡ್ಡೂರಿಗೆ ಎರಡು ಬೃಹತ್ ನೀರಿನ ಟ್ಯಾಂಕ್ ನಿರ್ಮಿಸಲಾಗುವುದು. ಮಾರಿಕಣಿವೆ ನೀರನ್ನು ಈ ತಿಂಗಳ ಅಂತ್ಯದೊಳಗೆ ಹರಿಸಲು ಕ್ರಮವಹಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

ಕಾಂಗ್ರೆಸ್ ಮಹಿಳಾ ತಾಲೂಕಾಧ್ಯಕ್ಷೆ ನಾಗರತ್ನಮ್ಮ, ಮುಖಂಡ ಎಸ್.ಟಿ.ಮಂಜುನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net