ದೇಗುಲ, ಮಠಗಳಿಗೆ ಕಾರಜೋಳ ಭೇಟಿ

Karajola
Published on

ಚಿತ್ರದುರ್ಗ: ಇಲ್ಲಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರು ಶನಿವಾರ ಜಿಲ್ಲೆಯ ವಿವಿಧ ದೇಗುಲ, ಮಠಗಳಿಗೆ ಭೇಟಿ ನೀಡಿದರು.

ಕೋಟೆನಗರಿಯ ಶಕ್ತಿದೇವತೆ ಉಚ್ಚಂಗಿ ಯಲ್ಲಮ್ಮ, ನೀಲಕಂಠೇಶ್ವರ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ, ಛಲವಾದಿ ಗುರುಪೀಠದ ಶ್ರೀ ಬಸವನಾಗಿದೇವ ಸ್ವಾಮೀಜಿ ಆಶೀರ್ವಾದ ಪಡೆದರು.

ನಂತರ ಸಿರಿಗೆರೆ ಬೃಹನ್ಮಠದ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಹೊಸದುರ್ಗ ಕುಂಚಿಟಿಗ ಮಹಾಸಂಸ್ಥಾನ ಮಠದ ಶ್ರೀ ಡಾ.ಶಾಂತವೀರ ಸ್ವಾಮೀಜಿ, ಭಗೀರಥ ಗುರುಪೀಠದ ಶ್ರೀ ಪರುಷೋತ್ತಮಾನಂದಪುರಿ ಸ್ವಾಮೀಜಿ, ಕಾಗಿನೆಲೆ ಶಾಖಾ ಮಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ಕೆಲಕಾಲ ಮಠಾಧೀಶರೊಂದಿಗೆ ಚರ್ಚಿಸಿದರು.

ಮಾಜಿ ಸಚಿವ ಮುರುಗೇಶ್ ನಿರಾಣಿ, ಎಂಎಲ್ಸಿ ಕೆ.ಎಸ್.ನವೀನ್, ಬಿಜೆಪಿ ಜಿಲ್ಲಾಧ್ಯಕ್ಷ ಎ.ಮುರಳಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಸಿದ್ದಾಪುರ, ಮುಖಂಡ ಅನಿತ್‌ಕುಮಾರ್, ವಕ್ತಾರ ದಗ್ಗೆ ಶಿವಪ್ರಕಾಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net