ದೇಗುಲಕ್ಕೆ ಪ್ರವಾಸಿಗರ ದಂಡು

ವಿಶ್ವ ವಿಖ್ಯಾತ ಶಿಲ್ಪಕಲೆಗಳ ಪ್ರವಾಸಿ ತಾಣ ಬೇಲೂರಿನ ಚನ್ನಕೇಶ್ವಸ್ವಾಮಿ ದೇಗುಲಕ್ಕೆ ಆಗಮಿಸಿರುವ ಪ್ರವಾಸಿಗರ ದಂಡು.
14blrp4
Published on


ಬೇಲೂರು: ಬಿಡುವು ನೀಡಿದ ಮಳೆ ಮತ್ತು ಸಾಲು ಸಾಲು ರಜೆ ಹಿನ್ನೆಲೆಯಲ್ಲಿ ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದೇಗುಲಕ್ಕೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ.


ಕುಟುಂಬ ಸಮೇತ ಆಗಮಿಸಿದ್ದ ಪ್ರವಾಸಿಗರು ಶಿಲ್ಪಕಲಾ ವೈಭವವನ್ನು ವೀಕ್ಷಿಸಿ ಸಂಭ್ರಮಿಸಿದರು. ಹಲವರು ದೇಗುಲ ಆವರಣದಲ್ಲಿ ಸೆಲ್ಫಿಗೆ ಮುಗಿ ಬಿದ್ದಿದ್ದರು. ದೇಗುಲಕ್ಕೆ ಹೆಚ್ಚಿನ ಪ್ರವಾಸಿಗರು ಆಗಮಿಸಿದ ಹಿನ್ನೆಲೆಯಲ್ಲಿ ಪಟ್ಟಣದ ಮುಖ್ಯರಸ್ತೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿತ್ತು. ಸಂಚಾರ ನಿಯಂತ್ರಣಕ್ಕಾಗಿ ಪೊಲೀಸರು ಹರ ಸಾಹಸ ಪಡುವಂತಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net