

ಚಿತ್ರದುರ್ಗ: ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಟೆನಗರಿಯ ನವದುರ್ಗಿಯರಾದ ಏಕನಾಥೇಶ್ವರಿ, ಬರಗೇರಮ್ಮ, ಉಚ್ಚಂಗಿಯಲ್ಲಮ್ಮ, ಕಣಿವೆಮಾರಮ್ಮ, ತ್ರಿಪುರಸುಂದರಿ ತಿಪ್ಪನಘಟ್ಟಮ್ಮ, ಗೌರಸಂದ್ರ ಮಾರಮ್ಮ, ಚೌಡೇಶ್ವರಿ, ಕುಕ್ಕವಾಡೇಶ್ವರಿ, ಬನ್ನಿ ಮಹಾಕಾಳಮ್ಮ ಶಕ್ತಿದೇವತೆಗಳ ದೇಗುಲಗಳಲ್ಲಿ ವಿಶೇಷಾಲಂಕಾರ ಸೇವೆ ನೆರವೇರಲಿದೆ.
ಇನ್ನೂ ದುರ್ಗಾಂಬಿಕಾ, ಮಲೆನಾಡು ಚೌಡೇಶ್ವರಿ, ಕೊಲ್ಲಾಪುರದ ಮಹಾಲಕ್ಷ್ಮೀ, ಅಂತರಘಟ್ಟಮ್ಮ, ಮಾಸ್ತಮ್ಮ, ಬುಡ್ಡಮ್ಮ, ಕಾಳಿಕಮಠೇಶ್ವರಿ, ಬೆಟ್ಟದ ಗಣಪತಿ, ಮೇಲುದುರ್ಗದ ಹಿಡಂಭೇಶ್ವರ, ಸಂಪಿಗೆ ಸಿದ್ದೇಶ್ವರ ಸೇರಿ ಹಲವು ದೇಗುಲಗಳಲ್ಲಿ ಅಲಂಕಾರದ ಜತೆ ಪೂಜೆ ಜರುಗಲಿದೆ.