ದೇಗುಲಗಳು ಮನಸ್ಸಿಗೆ ನೆಮ್ಮದಿ ತರುವ ಕೇಂದ್ರಗಳು

12 HANUR 3
Published on

ಹನೂರು: ತಾಲೂಕಿನ ಪುದು ರಾಮಾಪುರ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಶ್ರೀಲಕ್ಷ್ಮೀ ವೆಂಕಟೇಶ್ವರ ದೇಗುಲದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಆರ್.ನರೇಂದ್ರ ಭಾಗಿಯಾಗಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು.

ದೇಗುಲದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಆರ್.ನರೇಂದ್ರ, ದೇಗುಲಗಳು ಮನಸ್ಸಿಗೆ ನೆಮ್ಮದಿಯನ್ನು ತಂದು ಕೊಡುವ ಧಾರ್ಮಿಕ ಕೇಂದ್ರ. ಇಲ್ಲಿಗೆ ಭೇಟಿ ನೀಡುವುದರಿಂದ ಕಷ್ಟ ಕಾರ್ಪಣ್ಯಗಳು ದೂರವಾಗುತ್ತವೆಯಲ್ಲದೆ, ನೆಮ್ಮದಿ ಜೀವನವನ್ನು ಹೊಂದಬಹುದು ಎಂಬ ಭಾವನೆ ಜನರ ಮನದಲ್ಲಿದೆ. ಈ ದೆಸೆಯಲ್ಲಿ ಗ್ರಾಮದಲ್ಲಿ ಲಕ್ಷ್ಮೀವೆಂಕಟೇಶ್ವರ ದೇಗುಲವನ್ನು ನಿರ್ಮಿಸಿರುವುದು ಶ್ಲಾಘನೀಯ. ಹಾಗೆಯೇ ಮಕ್ಕಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದರೆ ಪಾಲಕರು ಶಿಕ್ಷಣದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು. ಈ ಮೂಲಕ ಅವರನ್ನು ವಿದ್ಯಾವಂತರನ್ನಾಗಿಸಬೇಕು. ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಹಾಗೂ ಗುರಿಯನ್ನು ಸಾಧಿಸಲು ಅಗತ್ಯ ಮಾರ್ಗದರ್ಶನ ನೀಡಬೇಕು. ಇದರಿಂದ ಉತ್ತಮ ಜೀವನವನ್ನು ರೂಪಿಸಿಕೊಳ್ಳಲು ಸಾಧ್ಯ ಎಂದು ತಿಳಿಸಿದರು.

ಬಳಿಕ ಅಜ್ಜೀಪುರ ಗ್ರಾಮದ ಶನೈಶ್ಚರಸ್ವಾಮಿ ದೇಗುಲದ ಉದ್ಘಾಟನಾ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಜಿಪಂ ಮಾಜಿ ಸದಸ್ಯ ಬಸವರಾಜು, ಹನೂರು ಪಿಎಸಿಸಿ ಅಧ್ಯಕ್ಷ ನಟರಾಜು, ಮುಖಂಡರಾದ ಮಣಿ, ನಾಗರಾಜು ಮತ್ತಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net