ದೇಮಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಜಿ.ಮಹೇಶ್ ಆಯ್ಕೆ

09rajesh10
Published on

ಚಾಮರಾಜನಗರ: ತಾಲೂಕಿನ ದೇಮಹಳ್ಳಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಜಿ.ಮಹೇಶ್ ಅವರು ಚುನಾವಣೆ ಮೂಲಕ ಶನಿವಾರ ಆಯ್ಕೆಯಾದರು.

ಈ ಹಿಂದೆ ದೇಮಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿದ್ದ ಪುನೀತ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗ್ರಾ.ಪಂ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಕಮರವಾಡಿ ಮಹೇಶ್ ಮತ್ತು ಜಿ.ಮಹೇಶ್ ಅವರು ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಈ ವೇಳೆ ಜಿ.ಮಹೇಶ್ ಅವರು 10 ಮತಗಳನ್ನು ಪಡೆದು ನೂತನ ಅಧ್ಯಕ್ಷರಾಗಿ ಆಯ್ಕೆಯಾದರು. ಪ್ರತಿಸ್ಪರ್ಧಿ ಕಮರವಾಡಿ ಮಹೇಶ್ 6 ಮತಗಳನ್ನು ಪಡೆದುಕೊಂಡರು. ಚುನಾವಣಾ ಅಧಿಕಾರಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಪುಷ್ಪಾ ಅವರು ಕಾರ್ಯನಿರ್ವಹಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷ ಜಿ.ಮಹೇಶ್ ಮಾತನಾಡಿ, ನನ್ನನ್ನು ಅಧ್ಯಕ್ಷನಾಗಿ ಆಯ್ಕೆಮಾಡಿದ ಸದಸ್ಯರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಸಂಸದರು ಮತ್ತು ಶಾಸಕರು ನಮಗೆ ಬೆಂಬಲ ನೀಡುತ್ತಿದ್ದು, ಗ್ರಾ.ಪಂ ವ್ಯಾಪ್ತಿಯಲ್ಲಿ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಲಾಗುವುದು. ರಸ್ತೆ ಮತ್ತು ಚರಂಡಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಗ್ರಾ.ಪಂ ವ್ಯಾಪ್ತಿಯಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗುವುದು ಎಂದರು.

ಗ್ರಾ.ಪಂ ಉಪಾಧ್ಯಕ್ಷೆ ರಾಜಮ್ಮ, ಸದಸ್ಯರಾದ ಡಿ.ಕೆ.ಶಿವಕುಮಾರ್, ಸುಮಿತ್ರಾ, ಬಸವಣ್ಣ, ನೀಲಾಂಬಿಕೆ, ಜಯಲಕ್ಷ್ಮೀ, ಭಾಗ್ಯಮ್ಮ, ಲತಾ ನಾಗಾರ್ಜುನ್ ಚುನಾವಣೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ರೇವಣ್ಣ, ಗೌಡಿಕೆ ಮಾದಪ್ಪ, ದೇಮಹಳ್ಳಿ ಶಿವಕುಮಾರ್, ನಟರಾಜ್, ಸಹಕಾರ ಸಂಘದ ಅಧ್ಯಕ್ಷ ಎಸ್.ಶಿವನಾಗಪ್ಪ, ಸಿದ್ದನಾಯಕ, ನಂಜುಂಡಪ್ಪ, ಮಹೇಶ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net