ದೇವರ ದಾಸಿಮಯ್ಯ ಜಯಂತಿ ಆಚರಣೆ

2-KGL-1
Published on

ಕೊಳ್ಳೇಗಾಲ: ತಾಲೂಕು ಆಡಳಿತ ವತಿಯಿಂದ ಬುಧವಾರ ಪಟ್ಟಣದಲ್ಲಿ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಆಚರಿಸಲಾಯಿತು.

ಪಟ್ಟಣದ ದೇವಲ ಮಹರ್ಷಿ ವೃತ್ತದಲ್ಲಿ ದೇವರ ದಾಸಿಮಯ್ಯ ಪುತ್ಥಳಿಗೆ ಶಾಸಕ ಎ.ಆರ್.ಕೃಷ್ಣಮೂರ್ತಿ ಪುಷ್ಪಮಾಲೆ ಅರ್ಪಿಸಿದರು. ನಂತರ ಮಾತನಾಡಿದ ಅವರು, ದೇವರ ದಾಸಿಮಯ್ಯ ಅವರ ಜೀವನವೇ ನಮಗೆ ಆದರ್ಶ. ಅವರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದರು.

ತಹಸೀಲ್ದಾರ್ ಬಸವರಾಜು, ನಗರಸಭೆ ಅಧ್ಯಕ್ಷೆ ರೇಖಾ ರಮೇಶ್, ಉಪಾಧ್ಯಕ್ಷ ಎ.ಪಿ.ಶಂಕರ್, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಸದಸ್ಯರು, ದೇವಾಂಗ ಸಮಾಜದ ಮುಖಂಡರಾದ ಅಚ್ಗಾಲ್ ನಾಗರಾಜಯ್ಯ, ವೇಣುಗೋಪಾಲ್, ದೇವರ ದಾಸಿಮಯ್ಯ ಪುತ್ಥಳಿ ನಿರ್ಮಾತೃ ಗಿರೀಶ್ ಬಾಬು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಕಾರ್ಯದರ್ಶಿ ಬಸ್ತೀಪುರ ರವಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net