ದೇವರ ದಾಸಿಮಯ್ಯ ಜಯಂತಿ ಇಂದು

Published on

ಕೊಳ್ಳೇಗಾಲ: ಪಟ್ಟಣದ ದೇವಾಂಗ ಪೇಟೆಯ ದೇವರ ದಾಸಿಮಯ್ಯ ವೃತ್ತದಲ್ಲಿ ಏ.2ರಂದು ಬೆಳಗ್ಗೆ 7.30ಕ್ಕೆ ದೇವರ ದಾಸಿಮಯ್ಯ ಜಯಂತಿ ಆಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ದೇವರ ದಾಸಿಮಯ್ಯ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವರು. ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net