ದೇವರಹಿಪ್ಪರಗಿ ಕ್ಷೇತ್ರದ ಕೆರೆಗಳು ಶೀಘ್ರ ಭರ್ತಿ

The lakes of Devahipparagi constituency are filling up fast
ಶಾಸಕ ರಾಜುಗೌಡ ಪಾಟೀಲ
Published on

ಹೂವಿನಹಿಪ್ಪರಗಿ: ಪ್ರಸ್ತುತ ವರ್ಷದಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗುತ್ತಿದ್ದು, ಕ್ಷೇತ್ರದ ಜನ ಹಾಗೂ ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ತಡೆಯಲು ದೇವರಹಿಪ್ಪರಗಿ ಕ್ಷೇತ್ರದಲ್ಲಿ ಬರುವ ಎಲ್ಲ ಕೆರೆಗಳನ್ನು ಭರ್ತಿ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ರಾಜುಗೌಡ ಪಾಟೀಲ ತಿಳಿಸಿದ್ದಾರೆ.

ಇತ್ತೀಚೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲ ಗ್ರಾಮಗಳ ಕೆರೆಗಳನ್ನು ಶೀಘ್ರದಲ್ಲಿ ಭರ್ತಿ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಹುಣಶ್ಯಾಳ ಕೆರೆ ತುಂಬುವ ಕಾಮಗಾರಿಯು ಡಿಸೆಂಬರ್ ತಿಂಗಳೊಳಗಾಗಿ ಪೂರ್ಣಗೊಳ್ಳಲಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net