ದೇವರಾಜ ಅರಸು ಜಯಂತಿ

20blrp3
Published on

ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸುರವರ 108ನೇ ವರ್ಷದ ಜಯಂತಿಯನ್ನು ಭಾನುವಾರ ಬೇಲೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಸಚಿವ ಬಿ.ಶಿವರಾಂ ನೇತೃತ್ವದಲ್ಲಿ ಪುಷ್ಪನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ಮಾಜಿ ಸಚಿವ ಬಿ.ಶಿವರಾಂ, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ.ಆರ್.ವೆಂಕಟೇಶ್, ಜಿಪಂ ಮಾಜಿ ಸದಸ್ಯ ಸಯ್ಯದ್ ತೌಫಿಕ್, ಪುರಸಭೆ ಸದಸ್ಯರಾದ ಭರತ್, ಜಮಾಲೂದ್ದೀನ್, ಹಿಂದುಳಿದ ವರ್ಗಗಳ ತಾಲೂಕು ಅಧ್ಯಕ್ಷ ಚಂದ್ರಶೇಖರ್, ಮುಖಂಡರಾದ ಸಂತೋಷ್, ಸೌಮ್ಯಾ, ರಾಜು, ರವಿ, ಅಶೋಕ್ ಸೇರಿದಂತೆ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net