

ಕಲಬುರಗಿ: ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ೧೦೮ನೇ ಜಯಂತ್ಯುತ್ಸವ ನಗರದ ಡಾ.ಎಸ್.ಎಂ. ಪಂಡಿತ ರಂಗಮAದಿರದಲ್ಲಿ ಭಾನುವಾರ ಬೆಳಗ್ಗೆ ೧೧ಕ್ಕೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ ಎಂದು ಹಿಂದುಳಿದ ಜಾತಿಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಮಹಾಂತೇಶ ಎಸ್.ಕೌಲಗಿ ತಿಳಿಸಿದರು. ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಬೆಳಗ್ಗೆ ೯ಕ್ಕೆ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಿಂದ ರಂಗಮAದಿರವರೆಗೆ ಅರಸು ಭಾವಚಿತ್ರದ ಬೃಹತ್ ಮೆರವಣಿಗೆ ನಡೆಯಲಿದೆ. ಡೊಳ್ಳು ಕುಣಿತ, ಲಂಬಾಣಿ, ಗೋಂದಳಿ, ಹೆಳವ, ಸಿಕ್ಕಲಿಗ, ಕಟಬು, ದರ್ವೇಶಿ, ದುರ್ಗಿ, ಮುರ್ಗಿ ಸಮುದಾಯದ ಕಲಾ ತಂಡಗಳು ಪ್ರದರ್ಶನ ನೀಡಲಿವೆ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಲಿದ್ದು, ಜಿಲ್ಲೆಯ ಸಚಿವರು, ಶಾಸಕರು, ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಡಾ.ಪದ್ಮರಾಜ ರಾಸೂಣಗಿ ವಿಶೇಷ ಉಪನ್ಯಾಸ ನೀಡಲಿದ್ದಾರೆ. ೨೦೨೨-೨೩ರ ಎಸ್ಸೆಸ್ಸೆಲ್ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ವಾರ್ಷಿಕ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದವರನ್ನು ಸನ್ಮಾನಿಸಲಾಗುವುದು ಎಂದರು.