

ಸವದತ್ತಿ: ಬಡವರ ಆಶಾಕಿರಣ, ಹಿಂದುಳಿದ ಸಮುದಾಯಗಳ ಏಳಿಗೆಗಾಗಿ ಹಗಲಿರುಳು ಶ್ರಮಿಸಿದ ಮಹಾನ್ ನಾಯಕ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಎಂದು ಶಾಸಕ ವಿಶ್ವಾಸ ವೆದ್ಯ ಹೇಳಿದರು.
ಇಲ್ಲಿನ ಗುರುಭವನದಲ್ಲಿ ತಾಲೂಕಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು 109ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಅರಸು ಅವರು ದೀರ್ಕಾಲ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ಉಳಿದಿದ್ದಾರೆ. ಅನೇಕ ಯೋಜನೆಗಳ ಮೂಲಕ ಅವರು ಬಡಜನರು, ದೀನ ದಲಿತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ್ದಾರೆ. ಹಾಸ್ಟೆಲ್ಗಳನ್ನು ಪ್ರಾರಂಭಿಸಿ ನೆರವಾಗಿದ್ದಾರೆ ಎಂದರು.
ಯರಗಟ್ಟಿಯಲ್ಲಿ ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ ಆರಂಭಿಸಿದ್ದೇವೆ. ಮುನವಳ್ಳಿಯಲ್ಲಿಯೂ ಹಾಸ್ಟೆಲ್ ಅವಶ್ಯವಿದ್ದು, ಪ್ರಯತ್ನಿಸಲಾಗುವುದು. ಸಚಿವರೊಂದಿಗೆ ಚರ್ಚಿಸಿ, ಒಂದು ಕೋಟಿ ರೂ. ವೆಚ್ಚದಲ್ಲಿ 4 ಸಮುದಾಯ ಭವನ ನಿರ್ಮಿಸುವ ಯೋಜನೆಯಿದೆ. ಆದಷ್ಟು ಬೇಗ ಚಾಲನೆ ಸಿಗಲಿದೆ ಎಂದು ಭರವಸೆ ನೀಡಿದರು.
ತಾಪಂ ಇಒ ಯಶವಂತಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್.ಎಲ್. ಕದಂ, ಸಮಾಜ ಕಲ್ಯಾಣಾಧಿಕಾರಿ ಆರ್. ಆರ್. ಕುಲಕರ್ಣಿ, ಎಪಿಎಂಸಿ ಅಧ್ಯ ಚಂದ್ರು ಜಂಬ್ರಿ, ಉಪಾಧ್ಯ ಮಾರುತಿ ಬಸಲಿಗುಂದಿ, ಪುರಸಭೆ ಮುಖ್ಯಾಧಿಕಾರಿ ಸಂಗನಬಸಯ್ಯ ಗದಗಿಮಠ, ಸಿಡಿಪಿಒ ಸುನೀತಾ ಪಾಟೀಲ, ಕೃಷಿ ಅಧಿಕಾರಿ ಶಿವಪ್ರಕಾಶ ಪಾಟೀಲ, ಅನಿಲ ಮರಲಿಂಗನವರ ಇತರರು ಇದ್ದರು.