ದೇವರಾಜೇಗೌಡರನ್ನು 3ದಿನ ಪೊಲೀಸ್ ವಶಕ್ಕೆ ನೀಡಿದ ನ್ಯಾಯಾಲಯ

ದೇವರಾಜೇಗೌಡರನ್ನು 3ದಿನ ಪೊಲೀಸ್ ವಶಕ್ಕೆ ನೀಡಿದ ನ್ಯಾಯಾಲಯ
Published on

ಹಾಸನ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಹಾಗೂ ಬಿಜೆಪಿ ಮುಖಂಡ ಜಿ.ದೇವರಾಜೇಗೌಡ ಅವರನ್ನು ಮೂರು ದಿನ ಪೊಲೀಸ್ ವಶಕ್ಕೆ ನೀಡುವಂತೆ ಹೊಳೆನರಸೀಪುರ ಜೆಎಂಎಫ್‌ಸಿ ನ್ಯಾಯಾಲಯ ಆದೇಶ ನೀಡಿದೆ.
ವಕೀಲ ಹಾಗೂ ಬಿಜೆಪಿ ಮುಖಂಡ ಜಿ.ದೇವರಾಜೇಗೌಡರನ್ನು ಅತ್ಯಾಚಾರ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ10ರಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪೊಲೀಸರು ಬಂಧಿಸಿದರು. ನಂತರ ಹೊಳೆನರಸೀಪುರ ಪೊಲೀಸರು ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆಗೆ ಒಳಪಡಿಸಿ ಮೇ11ರಂದು ಅವರನ್ನ 14 ದಿನಗಳ ನ್ಯಾಯಾಂಗ ಬಂದನಕ್ಕೆ ಕೋರ್ಟ್ ಆದೇಶ ನೀಡಿತ್ತು.
ಸೋಮವಾರ ಹೊಳೆನರಸೀಪುರ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ದೇವರಾಜೇಗೌಡರನ್ನ ಪೊಲೀಸ್ ವಶಕ್ಕೆ ನೀಡುವಂತೆ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸೋಮವಾರ ವಿಚಾರಣೆ ನಡೆಸಿದ ಜೆಎಂಎಫ್‌ಸಿ ನ್ಯಾಯಾಧೀಶರು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಆದೇಶ ನೀಡಿದ್ದಾರೆ.
ಹೊಳೆನರಸೀಪುರ ನಗರ ಪೊಲೀಸ್‌ರ ಅರ್ಜಿಯನ್ನ ಪುರಸ್ಕರಿಸಿದ ನ್ಯಾಯಾಲಯ ಮೇ 14 ಬೆಳಗ್ಗೆ 9:00 ಗಂಟೆಯಿಂದ ಮೇ16ರ ಸಂಜೆವರೆಗೂ ಮೂರು ದಿನಗಳ ಕಾಲ ಪೊಲೀಸ ವಶಕ್ಕೆ ನೀಡಲಾಗಿದೆ. ಇಂದು ಅವರನ್ನು ಜಿಲ್ಲಾ ಕಾರಾಗೃಹದಿಂದ ಹೆಚ್ಚಿನ ವಿಚಾರಣೆಗಾಗಿ ಹೊಳೆನರಸೀಪುರ ಪೊಲೀಸರು ಕರೆದೊಯ್ಯಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net