ದೇವರಾಣೆ ರಾಗಿ ಕಳ್ಳ ಆರೋಪ ಸುಳ್ಳು

29arsph1ep
Published on

ಬೆಳ್ತಂಗಡಿ(ದ.ಕ.): ಬಿಜೆಪಿ ಮುಖಂಡರು ನನ್ನ ಮೇಲೆ ಮಾಡಿದ ರಾಗಿ ಕದ್ದ ಆರೋಪ ಸುಳ್ಳು ಎಂಬ ಬಗ್ಗೆ ಶ್ರೀ ಮಂಜುನಾಥ ಸ್ವಾಮಿಯ ಮುಂದೆ ಆಣೆ ಪ್ರಮಾಣ ಮಾಡಿದ್ದೇನೆ. ಆರೋಪ ಮಾಡಿದವರೂ ಬಂದು ಪ್ರಮಾಣ ಮಾಡಲಿ ಅಥವಾ ದಾಖಲೆಗಳನ್ನು ಬಿಡುಗಡೆ ಮಾಡಲಿ. ದಾಖಲೆಗಳನ್ನು ನೀಡಿದರೆ ಕಾನೂನು ರೀತಿಯ ಹೋರಾಟಕ್ಕೂ ಸಿದ್ಧನಿ ದ್ದೇನೆ ಎಂದು ಅರಸೀಕೆರೆ ಜೆಡಿಎಸ್ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.


ಸೋಮವಾರ ಶ್ರೀ ಕ್ಷೇತ್ರ ಧರ್ಮ ಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯವರ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು. ಬಿಜೆಪಿ ಮುಖಂಡ ರವಿಕುಮಾರ್ ಸಾರ್ವಜನಿಕವಾಗಿ ನನ್ನ ಮೇಲೆ ರಾಗಿ ಕಳ್ಳ ಎಂದು ಆರೋಪ ಮಾಡಿದ್ದಾರೆ. ಆಗಲೇ ಅವರಿಗೆ ದಾಖಲೆಗ ಳನ್ನು ನೀಡಿ ಅಥವಾ ಧರ್ಮಸ್ಥಳಕ್ಕೆ ಪ್ರಮಾಣಕ್ಕೆ ಬನ್ನಿ ಎಂದು ಹೇಳಿದ್ದೆ. ಆದರೆ ಆರೋಪ ಮಾಡಿದವರು ಯಾವುದಕ್ಕೂ ಬರಲಿಲ್ಲ. ಆದ್ದರಿಂದ ನಾನೇ ಧರ್ಮಸ್ಥ ಳಕ್ಕೆ ಬಂದು ‘ನಾನು ಒಂದು ಕೆ.ಜಿ. ರಾಗಿಯನ್ನೂ ಕದ್ದಿಲ್ಲ. ನಾನು ರಾಗಿ ಕಳ್ಳ ಅಲ್ಲ’ ಎಂದು ಪ್ರಮಾಣ ಮಾಡಿದ್ದೇನೆ ಎಂದು ತಿಳಿಸಿದರು. ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡಿರುವ ಹೆಗ್ಗಡೆಯ ರಿಗೆ ಅಭಿನಂದನೆ ಸಲ್ಲಿಸಿದರು. ಶಾಸಕರೊಂದಿಗೆ ಅರಸೀಕೆರೆಯಿಂದ ಅವರ ಅಭಿಮಾನಿಗಳೂ ಆಗಮಿಸಿದ್ದರು.


ಜನಪ್ರತಿನಿಧಿಗಳ ಬಗ್ಗೆ ಇಷ್ಟೊಂದು ಹಗುರವಾಗಿ ಮಾತ ನಾಡುವುದು ಸರಿಯಲ್ಲ. ಇಂತಹ ಮಾತುಗಳಿಗೆ ಕಡಿ ವಾಣ ಹಾಕಬೇಕಾದ ಅಗತ್ಯವಿದೆ. ರಾಜಕೀಯ ಮಾಡುವವರು ಗೌರವಯುತವಾಗಿ ರಾಜಕೀಯ ಮಾಡಬೇಕು. ಕೊಳಕು ರಾಜಕೀಯಕ್ಕೆ ಇಳಿಯಬಾ ರದು. ಅದಕ್ಕಾಗಿ ಇಲ್ಲಿಗೆ ಬಂದು ಪ್ರಮಾಣ ಮಾಡಿ ದ್ದೇನೆ. ನನ್ನ ಕ್ಷೇತ್ರದಲ್ಲಿ ಅಶಾಂತಿ ನಿರ್ಮಾಣವಾಗಿದ್ದು, ಅಶಾಂತಿ ಶಮನವಾಗಿ ನೆಮ್ಮದಿ ನೆಲೆಸಲಿ ಎಂದು ದೇವರ ಮುಂದೆ ಪ್ರಾರ್ಥನೆ ಸಲ್ಲಿಸಿದ್ದೇನೆ.
ಶಿವಲಿಂಗೇಗೌಡ ಅರಸೀಕೆರೆ ಶಾಸಕ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net