ದೇವಸ್ಥಾನ ಜಮೀನು ವಿವಾದ, ಓರ್ವನ ಹತ್ಯೆ

1111
Published on

ಬೆಳಗಾವಿ: ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ಹಳೆಯ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವ್ಯಕ್ತಿ ಕೊಲೆಗೀಡಾದ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ಸತೀಶ ಪಾಟೀಲ (38) ಕೊಲೆಗೀಡಾದ ವ್ಯಕ್ತಿ.

ಗ್ರಾಮದಲ್ಲಿ ದೇವಸ್ಥಾನದ ಹಳೆ ಜಮೀನಿಗೆ ಸಂಬಂಧಿಸಿದಂತೆ ಎರಡು ಸಮುದಾಯಗಳ ನಡುವಿನ ವಿವಾದ ಘಟನೆ ಕಾರಣ. ಮನೆಯ ಮುಂದೆ ವಾಹನ ನಿಲ್ಲಿಸಿದಕ್ಕಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ.

ಉದ್ರಿಕ್ತ ಕಿಡಿಗೇಡಿಗಳ ಗುಂಪು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ, ಮನೆಗಳ ಮುಂದೆ ನಿಲ್ಲಿಸಿದ ವಾಹನಗಳಿಗೆ ಬೆಂಕಿ ಹಚ್ಚಿ ಕೆಲವರು ಪರಾರಿಯಾಗಿದ್ದಾರೆ.

ಈ ಘಲಾಟೆಯಲ್ಲಿ ಕಾರು, ಟ್ರಾೃಕ್ಟರ್, ನೀರಿನ ವಾಹನ ಸೇರಿ 15 ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಅಗ್ನಿ ಶಾಮಕದಳ ಸಿಬ್ಬಂಧಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಕಾಕತಿ ಪೊಲೀಸರು 15 ಜನರನ್ನು ವಶಕ್ಕೆ ಪಡೆದಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಕೆಎಸ್‌ಆರ್‌ಪಿ ಹಾಗೂ ಜಿಲ್ಲಾ ಸಶಸ್ತ್ರ ಪಡೆಗಳನ್ನು ನಿಯೋಜಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net