ದೇವಸ್ಥಾನಕ್ಕೆ ಹರಿದುಬಂದ ಭಕ್ತಸಾಗರ

11-09kodekal01
ಶ್ರಾವಣ ಮಾಸದ ಕೊನೇ ಸೋಮವಾರ ಕೊಡೇಕಲ್‌ನ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದರ್ಶನ ಪಡೆದರು.
Published on

ಕೊಡೇಕಲ್:ಶ್ರಾವಣ ಮಾಸದ ಕೊನೇ ಸೋಮವಾರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನಕ್ಕೆ ಜಿಲ್ಲೆ ಸೇರಿ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ದರ್ಶನ ಪಡೆದರು.

ಬೆಳಗ್ಗೆಯಿಂದಲೇ ಗ್ರಾಮದಲ್ಲಿರುವ ಎರಡು ಬಸವೇಶ್ವರ ದೇವಸ್ಥಾನಗಳಿಗೆ ಭಕ್ತರು ತಂಡೋಪ ತಂಡವಾಗಿ ಆಗಮಿಸಿ ತಮ್ಮ ಹರಕೆ ಸಲ್ಲಿಸಿದರು. ಪ್ಯಾಟಿ ಬಸವೇಶ್ವರ ದೇವಸ್ಥಾನದಲ್ಲಿ ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ನೂಕು ನುಗ್ಗಲು: ಶ್ರಾವಣ ಮಾಸದ ಕೊನೇ ಸೋಮವಾರವಾಗಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ ಕಾರ ದೇವಸ್ಥಾನಗಳಲ್ಲಿ ದರ್ಶನ ಪಡೆಯಲು ನೂಕು-ನುಗ್ಗಲು ಉಂಟಾಗಿದೆ. ಇನ್ನೂ ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತರು ಮೂಲ ಸೌಕರ್ಯಗಳಿಲ್ಲದೆ ತೊಂದರೆ ಕೂಡ ಅನುಭವಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net