ದೇವಸ್ಥಾನದ ಕಾಂಪೌಂಡ್ ಕಾಮಗಾರಿಗೆ ಚಾಲನೆ

26tnpnewsfile01
ತಿ.ನರಸೀಪುರ ತಾಲೂಕಿನ ಕೆಂಪನಪುರ ಗ್ರಾಮದಲ್ಲಿ ಶ್ರೀ ಸಿದ್ದಪ್ಪಾಜಿ-ಮಂಟೇಸ್ವಾಮಿ ದೇವಸ್ಥಾನದ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಅಶ್ವಿನ್ ಕುಮಾರ್ ಭೂಮಿಪೂಜೆ ನೆರವೇರಿಸಿದರು .
Published on

ತಿ.ನರಸೀಪುರ: ತಾಲೂಕಿನ ಕೆಂಪನಪುರ ಗ್ರಾಮದ ಶ್ರೀ ಸಿದ್ದಪ್ಪಾಜಿ-ಮಂಟೇಸ್ವಾಮಿ ದೇವಸ್ಥಾನದ 3.50 ಲಕ್ಷ ರೂ. ವೆಚ್ಚದ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಅಶ್ವಿನ್‌ಕುಮಾರ್ ಭೂಮಿಪೂಜೆ ನೆರವೇರಿಸಿದರು.

ದೇವಸ್ಥಾನಕ್ಕೆ ಕಾಂಪೌಂಡ್ ನಿರ್ಮಾಣದ ಅವಶ್ಯಕತೆ ಇತ್ತು. ಹಾಗಾಗಿ ಕಾಮಗಾರಿ ಮಾಡಲಾಗುತ್ತಿದೆ. ಗ್ರಾಮಸ್ಥರು ಶಾಂತಿ, ಸೌಹಾರ್ದ ಕಾಪಾಡಿಕೊಂಡು ಧಾರ್ಮಿಕ ಕಾರ್ಯಗಳನ್ನು ನಡೆಸುವಂತೆ ಸಲಹೆ ನೀಡಿದರು.

ಶಾಸಕನಾಗಿ ಆಯ್ಕೆಯಾದ ನಂತರ ಅಭಿವೃದ್ಧಿ ಕಾಮಗಾರಿಗೆ ಬಂದ ಅನುದಾನವನ್ನು ಕ್ಷೇತ್ರ ವ್ಯಾಪಿ ತಾರತಮ್ಯ ಇಲ್ಲದೆ ಹಂಚಿಕೆ ಮಾಡಿದ್ದೇನೆ. ಎಲ್ಲ ಸಮಾಜದವರನ್ನು ವಿಶ್ವಾಸಕ್ಕೆ ಪಡೆದು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಉಳಿದಿರುವ ಅಧಿಕಾರಾವಧಿಯಲ್ಲಿ ಹೆಚ್ಚಿನ ಅನುದಾನ ತಂದು ಗ್ರಾಮೀಣ ಪ್ರದೇಶದ ರಸ್ತೆ ಹಾಗೂ ಮೂಲಸೌಕರ್ಯಕ್ಕೆ ಹೆಚ್ಚಿನ ಒತ್ತು ಕೊಡುವ ಮೂಲಕ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಆಶಯ ಹೊಂದಿದ್ದೇನೆ ಎಂದರು. ಗ್ರಾ.ಪಂ.ಅಧ್ಯಕ್ಷ ಚಿಕ್ಕ ಮಲ್ಲಪ್ಪ(ರವಿ), ಸದಸ್ಯ ಗಂಗೇಶ್, ಕೆಂಪನಪುರ ಮಹದೇವ್ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net