ದೇವಾಲಯದ ಮರು ಪ್ರತಿಷ್ಠಾಪನೆ ಮಹೋತ್ಸವ

14-04-25--krs2 (2)
Published on

ಕೆ.ಆರ್.ಸಾಗರ: ಕೆ.ಆರ್.ಸಾಗರ ಅರಳಿಕಟ್ಟೆಯಲ್ಲಿರುವ ಶ್ರೀ ಸೀತಾರಾಮಂಜನೇಯ ದೇವಾಲಯ ನವೀಕರಣಗೊಂಡ ಹಿನ್ನೆಲೆಯಲ್ಲಿ ಅರ್ಚಕ ಪ್ರಸನ್ನ ನೇತೃತ್ವದಲ್ಲಿ ಹೋಮ-ಹವನ ವಿಶೇಷ ಪೂಜೆ ನಡೆಯಿತು.

ಅಣೆಕಟ್ಟೆ ನಿರ್ಮಾಣ ಸಂದರ್ಭದಲ್ಲಿ ಕಟ್ಟಿದ ಕೆ.ಆರ್.ಸಾಗರ ಗ್ರಾಮದ ಅರಳಿಕಟ್ಟೆಯಲ್ಲಿ ಬಳಿ ನಿರ್ಮಿಸಿದ್ದ ಶ್ರೀ ಸೀತಾ ರಾಮಂಜನೇಯ ದೇವಾಲಯದ ನವೀಕರಣವನ್ನು ಸುಮಾರು 8 ಲಕ್ಷ ರೂ. ವೆಚ್ಚದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಕೆಲಸ ಮಾಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮರುಪ್ರತಿಷ್ಠಾಪನಾ ಕಾರ್ಯಕ್ರಮ ನಡೆಯಿತು.

ಶ್ರೀರಾಮನವಮಿಯ ಅಂಗವಾಗಿ 9 ದಿನ ಸೋಮವಾರ ಶ್ರೀರಾಮ ಪಟ್ಟಾಭಿಷೇಕದ ಹಿನ್ನೆಲೆಯಲ್ಲಿ ದೇವಾಲಯದಲ್ಲಿರುವ ಸೀತಾರಾಮರ ವಿಗ್ರಹಕ್ಕೆ ವಿವಿಧ ಅಭಿಷೇಕ, ಅಲಂಕಾರ ಮಾಡಲಾಗಿತ್ತು ನಂತರ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮಾಡಿ ಪ್ರಸಾದ ವಿನಿಯೋಗ ಮಾಡಿದರು.

ನಂತರ ಮಧ್ಯಾಹ್ನ ಶ್ರೀ ಅಂಜನೇಯ ಭಕ್ತರ ಬಳಗದಿಂದ ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಸ್ಥಳೀಯ ಕ್ಷೇತ್ರದ ಶಾಸಕ ರಮೇಶ ಬಂಡಿಸಿದ್ದೇಗೌಡ, ಕಾ.ನೀ.ನಿಗಮ ಕಾರ್ಯಪಾಲಕ ಅಭಿಯಂತರ ಜಯಂತ್ ಸೇರಿದಂತೆ ಹಲವಾರು ಗಣ್ಯರು, ಮುಖಂಡರು, ಸಾರ್ವಜನಿಕರು ಸೀತಾ ರಾಮಂಜನೇಯ ದೇವರ ದರ್ಶನ ಪಡೆದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net