ದೇಶ ಒಡೆದ ಕಾಂಗ್ರೆಸ್‌ನಿಂದ ಜೋಡೋ ಯಾತ್ರೆ

6-22
ಬೆಳಗಾವಿ ನಗರದ ಕನ್ನಡ ಸಾಹಿತ್ಯ ಭವನದ ಸಭಾಂಗಣದಲ್ಲಿ ಶನಿವಾರ ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಶರದ ಪಾಟೀಲ ಇತರರಿದ್ದರು.
Published on

ಬೆಳಗಾವಿ: ಮುಂಬರುವ 2023ರ ವಿಧಾನಸಭೆ ಚುನಾವಣೆ ವೇಳೆಗೆ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್‌ನ ಹಾಲಿ, ಮಾಜಿ ಶಾಸಕರು ಬಿಜೆಪಿ ಸೇರ್ಪಡೆ ಆಗಲಿದ್ದಾರೆ. ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ ಕೂಡ ಬಿಜೆಪಿಗೆ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಬಿಜೆಪಿ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ನಮ್ಮ ವಿರೋಧ ಇಲ್ಲ ಎಂದು ಮಾಜಿ ಶಾಸಕ ಸಂಜಯ ಪಾಟೀಲ ಹೊಸ ಬಾಂಬ್ ಸಿಡಿಸಿದ್ದಾರೆ.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮುಖಂಡ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜಾಮೀನಿನ ಮೇಲೆ ಹೊರಬಂದಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜನ್ಮದಿನ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜು ಖರ್ಗೆ ಸೇರಿ ಕಾಂಗ್ರೆಸ್ ನಾಯಕರು ಭಾಗವಹಿಸಲು ಬರುತ್ತಿದ್ದಾರೆ. ಆ ಮೂಲಕ ಅವರೆಲ್ಲರೂ ಸಮಾಜಕ್ಕೆ ಏನು ಸಂದೇಶ ಕೊಡಲು ಹೊರಟಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು.

ಕುಟುಂಬ ರಾಜಕಾರಣ, ಅಧಿಕಾರದ ಸ್ವಾರ್ಥಕ್ಕಾಗಿ ದೇಶವನ್ನು ಇಬ್ಭಾಗ ಮಾಡಿದ ಕಾಂಗ್ರೆಸ್ ನಾಯಕರು ಇದೀಗ ಮತ್ತೆ ಅಧಿಕಾರಕ್ಕಾಗಿ ಭಾರತ ಜೋಡೋ ಪಾದಯಾತ್ರೆ ಮಾಡುತ್ತಿದ್ದಾರೆ. ಕೊಲೆ ಆರೋಪಿಗಳನ್ನೂ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ ವಾಗ್ದಾಳಿ ನಡೆಸಿದರು. ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಧಿಕಾರದ ಆಡಳಿತಾವಧಿಯಲ್ಲಿ ಹಿಂದು ಕಾರ್ಯಕರ್ತರ ನಿರಂತರವಾಗಿ ಕೊಲೆಗಳು ನಡೆದವು. ಆದರೆ, ಯಾವುದೇ ಕಾಂಗ್ರೆಸ್ ನಾಯಕರು ಧ್ವನಿ ಎತ್ತಲಿಲ್ಲ. ಅಧಿಕಾರಕ್ಕಾಗಿ ಹಿಂದು ಕಾರ್ಯಕರ್ತರನ್ನು ಕೊಲೆ ಮಾಡಿರುವ ಆರೋಪಿಗಳನ್ನು ರಕ್ಷಣೆ ಮಾಡಿದರು. 9 ತಿಂಗಳು ಜೈಲಿನಲ್ಲಿದ್ದು
ಬಂದ ವಿನಯ ಜನ್ಮದಿನವನ್ನು ಕಾಂಗ್ರೆಸ್ಸಿಗರು ಕಿತ್ತೂರಿನಲ್ಲಿ ಆಚರಣೆ ಮಾಡುತ್ತಿರುವುದು ಯಾವ ಸಂದೇಶ ಎಂದು ವ್ಯಂಗ್ಯವಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net