ದೇಶಕ್ಕಾಗಿ ಬಲಿದಾನಗೈದವರ ಮರೆಯದಿರಿ

15 ard 01
Published on

ಔರಾದ್: ವೀರ ಸೇನಾನಿಗಳು, ಹೋರಾಟಗಾರರ ಪ್ರಾಣ ತ್ಯಾಗದಿಂದ ಭಾರತಕ್ಕೆ ಸ್ವಾತಂತ್ರÈ ದೊರಕಿದೆ. ಅವರೆಲ್ಲರನ್ನು ಎಂದಿಗೂ ಮರೆಯಬಾರದು ಎಂದು ಶಾಸಕ ಪ್ರಭು ಚವ್ಹಾಣ್ ಮನವಿ ಮಾಡಿದರು. ತಹಸಿಲ್ ಕಚೇರಿಯಲ್ಲಿ ತಾಲೂಕು ಆಡಳಿತ ಮಂಗಳವಾರ ಏರ್ಪಡಿಸಿದ್ದ ಸ್ವಾತಂತ್ರ ದಿನಾಚರಣೆಯಲ್ಲಿ ರಾಷ್ಟç ಧ್ವಜಾರೋಹಣ ನೆರವೇರಿಸಿದ ಅವರು, ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ಹಿಂದುಳಿದ ತಾಲೂಕು ಎಂಬ ಹಣೆಪಟ್ಟಿ ತೊಲಗಿಸಲು ಬದ್ಧವಾಗಿರುವುದಾಗಿ ಹೇಳಿದರು. ಸಾಹಿತಿ ನಾಗನಾಥ ಚಿಟ್ಮೆ ಮಾತನಾಡಿ, ಹಲವರ ಪ್ರಾಣತ್ಯಾಗ, ಬಲಿದಾನದಿಂದ ಸ್ವಾತಂತ್ರÈ ದೊರಕಿದೆ ಎಂದರು. ತಹಸೀಲ್ದಾರ್ ಮಲಶೆಟ್ಟಿ ಚಿದ್ರೆ, ತಾಪಂ ಇಒ ಬೀರೇಂದ್ರಸಿAಗ್ ಠಾಕೂರ್, ಪಪಂ ಮುಖ್ಯಾಧಿಕಾರಿ ಸ್ವಾಮಿದಾಸ್, ಎಪಿಎಂಸಿ ಅಧ್ಯಕ್ಷ ಧೋಂಡಿಬಾ ನರೋಟೆ, ಉಪಾಧ್ಯಕ್ಷ ಸಂದೀಪ ಪಾಟೀಲ್, ಬಿಇಒ ಮಕ್ಸೂದ್ ಅಹ್ಮದ್, ಪಿಎಸ್‌ಐ ಉಪೇಂದ್ರಕುಮಾರ ಇತರರಿದ್ದರು. ಕಸಾಪ ತಾಲೂಕು ಅಧ್ಯಕ್ಷ ಡಾ.ಶಾಲಿವಾನ ಉದಗೀರೆ ನಿರೂಪಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net