ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದವರು ಅಂಬೇಡ್ಕರ್

23 SARAG 03
ಸರಗೂರು ತಾಲೂಕಿನ ಹಾದನೂರು ಗ್ರಾಮದಲ್ಲಿ ನೂತನ ರಾಜೀವ್ ಗಾಂಧಿ ಸೇವಾ ಕೇಂದ್ರವನ್ನು ಶಾಸಕ ಅನೀಲ್ ಚಿಕ್ಕಮಾದು ಉದ್ಘಾಟಿಸಿದರು. ಪ್ರಿಯಾಂಕಾ ನಾಗರಾಜು, ಜ್ಯೋತಿ ರಮೇಶ್, ಪ್ರಕಾಶ್, ಶಿವರಾಜು ಅರಸು, ರತ್ನಮ್ಮ ರಾಜೇಶ್, ಭಾಗ್ಯಾ, ಶಿವಲಿಂಗಯ್ಯ, ಗಂಗಾಧರ್ ಇದ್ದರು.
Published on

ಸರಗೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ಸರ್ಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡಿದರೂ ದೇಶಕ್ಕೆ ಶ್ರೇಷ್ಠ ಸಂವಿಧಾನ ನೀಡಿದ್ದಾರೆ ಎಂದು ಶಾಸಕ ಅನಿಲ್ ಚಿಕ್ಕಮಾದು ಸ್ಮರಿಸಿದರು.

ತಾಲೂಕಿನ ಹಾದನೂರು ಗ್ರಾಮದಲ್ಲಿ ರಾಜೀವ್ ಗಾಂಧಿ ಸೇವಾ ಕೇಂದ್ರ, ಅಂಬೇಡ್ಕರ್ ಭವನ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಅಂಗನವಾಡಿ ಕಟ್ಟಡ ಹಾಗೂ ಬಡಗಲಪುರದಲ್ಲಿ ಶಾಲೆ ಮತ್ತು ಅಂಗನವಾಡಿ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿದ ಬಳಿಕ ಹಾದನೂರಲ್ಲಿ ಆಯೋಜಿಸಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಾನು ಶಾಸಕನಾಗಿ ಆಯ್ಕೆಯಾಗಿದ್ದೇನೆ ಎಂದರು.

ಹಾದನೂರು ಗ್ರಾಮದ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ. ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದರೂ ತಾಲೂಕಿಗೆ 800 ಕೋಟಿ ರೂ. ಅನುದಾನವನ್ನು ಅವಳಿ ತಾಲೂಕಿಗೆ ತರಲಾಗಿದೆ ಎಂದು ಹೇಳಿದರು.

ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಎಚ್.ಸಿ.ನರಸಿಂಹಮೂರ್ತಿ ಮಾತನಾಡಿ, ಭವನವನ್ನು ಬೇರೆ ಕಾರ್ಯಗಳಿಗೆ ಉಪಯೋಗಿಸಿಕೊಳ್ಳದೆ ಗ್ರಂಥಾಲಯವನ್ನಾಗಿ ಮಾಡಿಕೊಳ್ಳುವುದು ಉತ್ತಮ. ಅದಕ್ಕಾಗಿ 15,000 ಪುಸ್ತಕಗಳನ್ನು ತೆಗೆದುಕೊಡಲಾಗುವುದು ಎಂದು ಭರವಸೆ ನೀಡಿದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಚಿಕ್ಕವೀರನಾಯಕ, ಗ್ರಾಪಂ ಸದಸ್ಯ ಪ್ರಕಾಶ್, ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಪ್ರಿಯಾಂಕಾ ನಾಗರಾಜು, ಉಪಾಧ್ಯಕ್ಷೆ ಜ್ಯೋತಿ ರಮೇಶ್, ಮಾಜಿ ಅಧ್ಯಕ್ಷೆ ರತ್ನಮ್ಮ ರಾಜೇಶ್, ಶಿವಲಿಂಗಯ್ಯ, ಗಂಗಾಧರ್, ಮಂಜುಳಾ ರಾಮಚಂದ್ರ, ಭಾಗ್ಯಾ, ಶಿವಕುಮಾರ್, ನಿರ್ಮಿತಿ ಕೇಂದ್ರದ ಇಂಜಿನಿಯರ್ ಜಯರಾಮ್, ಪಿಡಿಒ ಪುಟ್ಟವೀರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net