ದೇಶದ ಅಭಿವೃದ್ಧಿಯಲ್ಲಿ ಪಾತ್ರವಹಿಸಿ

15 YERRISWAMY 05
????????????
Published on

ಬಳ್ಳಾರಿ : ಪ್ರತಿಯೊಬ್ಬ ಭಾರತೀಯನು ಉತ್ತಮ ಕಾರ್ಯಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು, ದೇಶದ ಅಭಿವೃದ್ಧಿಯಲ್ಲಿ ಪಾತ್ರವಹಿಸಬೇಕು ಎಂದು ವಿಎಸ್‌ಕೆ ವಿವಿ ಕುಲಪತಿ ಪ್ರೊ. ಜೆ.ತಿಪ್ಪೇರುದ್ರಪ್ಪ ಹೇಳಿದರು.
ಇಲ್ಲಿನ ವಿಎಸ್‌ಕೆ ವಿವಿ ಆವರಣದಲ್ಲಿ 78ನೇ ಸ್ವಾತಂತ್ರೃ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ವಿಕಸಿತ ಭಾರತ 2047 ಭಾರತವನ್ನು ಅಭಿವೃದ್ಧಿ ರಾಷ್ಟವನ್ನಾಗಿ ಮಾಡುವದಾಗಿದೆ. ಭಾರತದ ಆರ್ಥಿಕ ಬೆಳವಣಿಗೆ, ಸಾಮಾಜಿಕ ಪ್ರಗತಿ, ಪರಿಸರ ಸುಸ್ಥಿರತೆ ಹಾಗೂ ಉತ್ತಮ ಆಡಳಿತ ಸೇರಿದಂತೆ ಹಲವಾರು ಅಂಶಗಳು ಸೇರಿವೆ. ಅಭಿವೃದ್ಧಿ ಸಾಧಿಸಲು ಜನರ ಸಂಕಲ್ಪ ಮುಖ್ಯವಾಗಿದೆ ಎಂದು ಹೇಳಿದರು.
ಸ್ವಾತಂತ್ರೃ ದಿನಾಚರಣೆಯ ಪ್ರಯುಕ್ತ ಅಂತರ ವಿಭಾಗೀಯ ಕ್ರೀಡಾಕೂಟ ಆಯೋಜಿಸಲಾಗಿತ್ತು. ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ಪದಕ ವಿತರಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net