ದೇಶದ ಜನರ ಮೇಲೆ ಕೇಂದ್ರದಿಂದ ದಾಳಿ: ರಣದೀಪ್ ಸಿಂಗ್ ಸುರ್ಜೇವಾಲ ಆರೋಪ

dvg-Ranadeep-sing-surjewala-26_20240427230301426.jpg
Published on

ಹಾಸನ: ದೇಶದ ಸರ್ವಜನರ ಹಿತರಕ್ಷಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು. ಆ ಮೂಲಕ ಹಿಂದುಳಿದ, ದಲಿತರ, ಅಲ್ಪಸಂಖ್ಯಾತರ, ಶೋಷಿತರ ಅಭಿವೃದ್ಧಿಗೆ ಪಣತೊಟ್ಟರು. ಆದರೆ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಶೋಷಿತರ, ದಮನಿತರ, ಯುವಕ ಜೀವನವನ್ನು ಹಾಳು ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಬಡವರ, ಹಿಂದುಳಿದವರ ಪರವಾಗಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಹಾಗಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೇಲೆ ನಿರಂತರವಾಗಿ ಬಿಜೆಪಿ ದಾಳಿ ಮಾಡುತ್ತಿದೆ. ಇದು ರಾಜ್ಯದ ಜನರ ಮೇಲೆ ಮಾಡುತ್ತಿರುವ ದಾಳಿಯಾಗಿದೆ ಎಂದು ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರ ಹೊರಡಿಸಿರುವ ಕಾಂಗ್ರೆಸ್ ಗ್ಯಾರೆಂಟಿಗಳ ಮೇಲೆ ದಾಳಿ ಮಾಡುವ ಮೂಲಕ ದುರ್ಬಲ ವರ್ಗದ ಶಕ್ತಿ ಕಸಿದುಕೊಳ್ಳುವ ಪ್ರಯತ್ನ ಮಾಡಲಾಗುತ್ತಿದೆ. ಕಾಂಗ್ರೆಸ್‌ನ ಪ್ರಬಲ ನಾಯಕರು ಇರುವವರೆಗೂ ಯೋಜನೆಗಳನ್ನು ಕಸಿಯುವ ಕೆಲಸ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಸವಾಲೆಸೆದರು.

ನಾವು ಸಂವಿಧಾನದ ರಕ್ಷಣೆ ಮಾಡುತ್ತೇವೆ. ಅದರ ಮೂಲಕ ಬಡವರ, ಹಿಂದುಳಿದವರ, ಶೋಷಿತರ ಪರವಾಗಿ ಕೆಲಸ ಮಾಡಲು ಎಲ್ಲರೂ ಒಂದಾಗಿದ್ದೇವೆ. ಇದುವೇ ನಮ್ಮ ಭಾರತವಾಗಿದ್ದು, ಇದನ್ನು ಮೋದಿ ಸರ್ಕಾರ ಮನಗಾಣಬೇಕಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net