

ಭಾಲ್ಕಿ: ಭಾರತದ ಸಂವಿಧಾನ ನಮ್ಮ ದೇಶದ ಜೀವಾಳವಾಗಿದೆ. ಇದರ ಮಹತ್ವ ಎಲ್ಲರೂ ತಿಳಿದುಕೊಳ್ಳಬೇಕು ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸೂರ್ಯಕಾಂತ ಬಿರಾದಾರ ಅಭಿಪ್ರಾಯಪಟ್ಟರು.
ಪಟ್ಟಣದ ಪುರಭವನ (ಟೌನ್‌ಹಾಲ್)ದಲ್ಲಿ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನದ ನಿಮಿತ್ತ ಶುಕ್ರವಾರ ಏರ್ಪಡಿಸಿದ್ದ ಭಾರತ ಸಂವಿಧಾನ ಪೀಠಿಕೆ ವಾಚನ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವದಲ್ಲೇ ಅತಿ ದೊಡ್ಡದ್ದು ಭಾರತದ ಸಂವಿಧಾನ. ಡಾ.ಬಿ.ಆರ್.ಅಂಬೇಡ್ಕರ್ ರಚಿಸಿರುವ ವಿಶ್ವಮಾನ್ಯ ಸಂವಿಧಾನ ಅಧ್ಯಯನ ಮಾಡಬೇಕು ಎಂದರು.
ತಹಸೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರೆ ಮಾತನಾಡಿ, ಪೀಠಿಕೆ ಸಂವಿಧಾನದ ಹೃದಯವಾಗಿದೆ. ಪೀಠಿಕೆ ಓದಿ ಅರ್ಥ ಮಾಡಿಕೊಳ್ಳುವುದು ಭಾರತೀಯರಾದ ನಮ್ಮೆಲ್ಲರ ಕರ್ತವ್ಯ ಮತ್ತು ಜವಾಬ್ದಾರಿ ಎಂದರು.
ಹಿAದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ವಿಜಯಮಾಲಾ ವಗ್ಗೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸತೀಶಕುಮಾರ ಸಂಗನ ಮಾತನಾಡಿದರು. ಕಲಾವಿದ ಪ್ರಭು ಕಾಂಬಳೆ ಕುಂಟೆ ಸಿರಸಿ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಿತು.
ಶಿಶು ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ ಬಾಲವಾಲೆ, ಪುರಸಭೆ ಮುಖ್ಯಾಧಿಕಾರಿ ನಾಗಣ್ಣ ಪರೀಟ, ವಿಶ್ವನಾಥ ಬಳಕಟ್ಟೆ, ಕಸಾಪ ಅಧ್ಯಕ್ಷ ನಾಗಭೂಷಣ ಮಾಮಡಿ, ಕೃಷಿ ಅಧಿಕಾರಿ ಮಲ್ಲಿಕಾರ್ಜುನ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಜಯರಾಜ ದಾಬಶೆಟ್ಟಿ ಉಪಸ್ಥಿತರಿದ್ದರು. ಸತೀಶಕುಮಾರ ಸ್ವಾಗತಿಸಿದರು. ದೀಪಕ ಥಮಕೆ ನಿರೂಪಣೆ ಮಾಡಿದರು. ಮಲ್ಲಿಕಾರ್ಜುನ ವಂದಿಸಿದರು.