ದೇಶದ ಪ್ರಗತಿಗಾಗಿ ಮತ ಚಲಾಯಿಸಿ

01 yerriswamy 04
Published on

ಬಳ್ಳಾರಿ : ದೇಶದ ಪ್ರಗತಿಗಾಗಿ ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಪಂ ಇಒ ಮಡಗಿನ ಬಸಪ್ಪ ಹೇಳಿದರು.
ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿ ಸ್ಥಳದಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೇ 07 ರಂದು ತಪ್ಪದೇ ಮತದಾನ ಮಾಡಬೇಕು. ದೇಶದ ಉನ್ನತಿಗಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಕರೆ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net