

ಚಿಕ್ಕಮಗಳೂರು: ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ದೇಶದ ಭವಿಷ್ಯಕ್ಕಾಗಿ ಉತ್ತಮ ಪ್ರಜೆಗಳನ್ನು ರೂಪಿಸುವ ಸಂಸ್ಥೆಯಾಗಿದೆ. ಸತತ ಪ್ರಯತ್ನದಿಂದ ಈ ಸಂಸ್ಥೆಯನ್ನು ಅಭಿವೃದ್ಧಿ ಮಾಡಬೇಕು ಎಂದು ಸ್ಕೌಟ್ಸ್ ಅಂಡ್ ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಎಂ.ಎನ್.ಷಡಾಕ್ಷರಿ ತಿಳಿಸಿದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯಿAದ ಶುಕ್ರವಾರ ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ೨೦೨೩-೨೪ನೇ ಸಾಲಿನ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಇತ್ತೀಚಿನ ದಿನಗಳಲ್ಲಿ ಯುವಕರು ಮತ್ತು ಮಕ್ಕಳು ಕುಡಿತ, ಜುಜಾಟಗಳಂತಹ ಕೆಟ್ಟ ಚಟಗಳಿಗೆ ಬಲಿಯಾಗಿ ತಮ್ಮ ಜೀವನವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಇಂತಹ ಕೆಟ್ಟ ಚಟಗಳಿಂದ ಅವರನ್ನು ದೂರ ಮಾಡಲು ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯು ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಪ್ರಾಯೋಗಿಕ ಶಿಬಿರಗಳನ್ನು ಮಾಡುತ್ತಿದೆ. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಬೇಕು. ಜಗತ್ತಿನಾದ್ಯಂತ ಭ್ರಾತೃತ್ವವನ್ನು ಬೆಳೆಸುವ ಸಂಸ್ಥೆ ಇದಾಗಿದೆ ಎಂದರು.
ಪ್ರಪಂಚದಾದ್ಯAತ ಶಾಂತಿಯನ್ನು ಸಾರುವ ಈ ಸಂಸ್ಥೆಗೆ ನೋಬೆಲ್ ಪ್ರಶಸ್ತಿ ಲಭಿಸಿರುವುದು ಹೆಮ್ಮೆಯ ಸಂಗತಿ. ಯಾವುದೇ ಬೇಧ ಭಾವವಿಲ್ಲದೆ ವಯಸ್ಸಿನ ಮಿತಿಯಿಲ್ಲದೇ ಯಾವುದೇ ಸಂಭಾವನೆಯನ್ನು ನೀರಿಕ್ಷಿಸದೆ ನಿಸ್ವಾರ್ಥ ಭಾವದಿಂದ ಸಂಸ್ಥೆಗೆ ಸದಾ ನಿಷ್ಠೆಯಿಂದ ಸೇವೆ ಸಲ್ಲಿಸಿರುವ ಸ್ಕೌಟ್ಸ್ ಮತ್ತು ಗೈಡ್ಸ್ಗಳಿಂದ ಇದು ಸಾಧ್ಯವಾಗಿದೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ನೀಲಕಂಠಚಾರ್ ವಾರ್ಷಿಕ ವರದಿ ವಾಚಿಸಿದರು. ಜಿಲ್ಲಾ ಖಜಾಂಚಿ ಕೆ.ಎಸ್. ರಮೇಶ್ ಲೆಕ್ಕಪತ್ರ ಮಂಡಿಸಿದರು. ಗೈಡ್ಸ್ ಆಯುಕ್ತೆ ಮಮತಾ, ಜಿಲ್ಲಾ ತರಬೇತಿ ಆಯುಕ್ತೆ ಸಂಧ್ಯಾರಾಣಿ, ಸ್ಕೌಟ್ಸ್ ಜಿಲ್ಲಾ ಆಯುಕ್ತ ಟಿ.ಕೆ. ಫಣಿರಾಜ್ ಉಪಸ್ಥಿತರಿದ್ದರು.