ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಮೋದಿ ಶ್ರಮ

IMG_20200919_130731
Published on

ಬೀದರ್: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ 70ನೇ ಜನ್ಮ ದಿನದ ನಿಮಿತ್ತ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ವತಿಯಿಂದ ಸೇವಾ ಸಪ್ತಾಹ ಕಾರ್ಯಕ್ರಮ ನಗರದ ಜ್ಯೋತಿಬಾ ಫುಲೆ ವೃದ್ಧಾಶ್ರಮದಲ್ಲಿ ಶನಿವಾರ ಸಂಭ್ರಮದಿಂದ ಜರುಗಿತು.

ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಹಾಗೂ ಇತರರಿಗೆ ಹಣ್ಣು ವಿತರಣೆ ಮಾಡಿದ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರಹಂತ ಸಾವಳೆ ಮಾತನಾಡಿ, ಪ್ರಧಾನ ನರೇಂದ್ರ ಮೋದಿ ಅವರು ಜನ್ಮ ದಿನವನ್ನು ದೇಶಾದ್ಯಂತ ಸೇವಾ ಸಪ್ತಾಹ ಕಾರ್ಯಕ್ರಮವಾಗಿ ಆಚರಿಸಲಾಗುತ್ತಿದೆ. ರಕ್ತ ದಾನ ಶಿಬಿರ, ರೋಗಿಗಳಿಗೆ ಹಣ್ಣು ವಿತರಣೆ ಸೇರಿದಂತೆ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದರು.

ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರಧಾನಿ ಮೋದಿ ಅವರು ಹಲವು ಜನಪರ ಯೋಜನೆಗಳು ಜಾರಿಗೆ ತಂದಿದ್ದಾರೆ. ಭಾರತವನ್ನು ವಿಶ್ವಗುರುವಾಗಿ ಮಾಡುವ ನಿಟ್ಟಿನಲ್ಲಿ ಮೋದಿ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶೋಕ ಹೊಕ್ರಾಣೆ, ಅಲ್ಪಸಂಖ್ಯಾತರ ಮೋರ್ಚಾದ ಜಿಲ್ಲಾಧ್ಯಕ್ಷ ಎಂಡಿ ಸಲಾವೊದ್ದೀನ್, ಪ್ರಮುಖರಾದ ರೌಫೊದ್ದೀನ್ ಕಚೇರಿವಾಲಾ, ಸೈಯದ್ ಅಮ್ಜದ್ ಅಲಿ, ನವೀನ್ ಚಿಟ್ಟಾ, ಇಜಾಜ್ ಅಲಿ ಸೇರಿದಂತೆ ಇತರರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net