

ಚಿತ್ರದುರ್ಗ: ದೇಶದ ಸುರಕ್ಷತೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂದು ಮಾಜಿ ಶಾಸಕ ಎಸ್.ಕೆ.ಬಸವರಾಜನ್ ಹೇಳಿದರು.
ನಗರದ ತಮ್ಮ ನಿವಾಸಕ್ಕೆ ಬಿಜೆಪಿ ಅಭ್ಯರ್ಥಿ ಗೋವಿಂದ ಎಂ.ಕಾರಜೋಳ ಬುಧವಾರ ಭೇಟಿ ನೀಡಿದ್ದ ವೇಳೆ ಮಾತನಾಡಿ, ದೇಶದ ಭದ್ರತೆ, ಸುರಕ್ಷತೆಗಾಗಿ ಮೋದಿ ಅವರ ಕೈ ಬಲಪಡಿಸಬೇಕು ಎಂದರು.
ಕಳೆದ 10 ವರ್ಷಗಳು ತಮ್ಮ ಆಡಳಿತಾವಧಿ ಮೋದಿ ಅವರು ಹಲವು ಕಠಿಣ ನಿರ್ಧಾರಗಳ ಮೂಲಕ ದೇಶ ಮತ್ತು ಜನರನ್ನು ರಕ್ಷಿಸುತ್ತಿದ್ದಾರೆ ಎಂದು ಹೇಲಿದರು.
ಗೋವಿಂದ ಕಾರಜೋಳ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿಗಳಿಂದಾಗಿ ಯಾವುದೇ ಅಭಿವೃದ್ಧಿ ಕೆಲಸಗಳಾಗುತ್ತಿಲ್ಲ. ಕಾಂಗ್ರೆಸ್ ಶಾಸಕರು ಮತ ಕೇಳಲು ಹೆದರುತ್ತಿದ್ದಾರೆ. ಕಾಂಗ್ರೆಸ್ ಮಂತ್ರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಒಂದು ಕೆಲಸವೂ ಆಗುತ್ತಿಲ್ಲ. ಎಂದು ದೂರಿದರು.
ಮಾಜಿ ಶಾಸಕ ಪ್ರೊ.ಲಿಂಗಪ್ಪ, ಜಿಪಂ ಮಾಜಿಅಧ್ಯಕ್ಷೆ ಸೌಭಾಗ್ಯಾ, ಮಾಜಿ ಸದಸ್ಯ ಲಕ್ಷ್ಮಣ, ಜೆಎನ್.ಕೋಟೆ ಗುರುಸಿದ್ದಪ್ಪ, ಶೈಲಜಾ ರೆಡ್ಡಿ,ನಗರಸಭೆ ಸದಸ್ಯ ಸುರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಇದ್ದರು.