ದೇಶದಲ್ಲಿ ಬಿಜೆಪಿ ಮೇಲಿನ ವಿಶ್ವಾಸ ಇಮ್ಮಡಿ: ಶಾಸಕ ಹರತಾಳು ಹಾಲಪ್ಪ

SGR WEB
Published on

ಸಾಗರ: ಕೇಂದ್ರ ಮತ್ತು ರಾಜ್ಯದಲ್ಲಿ ಜನಪರ ಆಡಳಿತ ನೀಡುತ್ತಿರುವ ಬಿಜೆಪಿ ಮೇಲಿನ ವಿಶ್ವಾಸ ಇಮ್ಮಡಿಗೊಂಡಿದೆ. ಎಲ್ಲ ವರ್ಗದ ಜನರು ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಬೇರೆ ಬೇರೆ ಪಕ್ಷದಿಂದ ಬಿಜೆಪಿ ಸೇರುತ್ತಿರುವುದು ಆಶಾದಾಯಕ ಬೆಳವಣಿಗೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು.

ನಗರದ ಬಿಜೆಪಿ ಕಾರ್ಯಾಲಯದಲ್ಲಿ ವಿವಿಧ ಪಕ್ಷಗಳನ್ನು ತೊರೆದು ಬಿಜೆಪಿ ಸೇರ್ಪಡೆಗೊಂಡವರನ್ನು ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದ ಅವರು, ಹಿಂದಿನ ಸರ್ಕಾರಗಳು ಮಾಡುತ್ತಿದ್ದ ಯೋಜನೆ ಗೊತ್ತುಗುರಿ ಇಲ್ಲದ್ದಾಗಿತ್ತು. ಆದರೆ ಈಗಿನ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರ ಅಗತ್ಯ ತಿಳಿದು ಪರಿಣಾಮಕಾರಿ ಆಗಿರುವ ಯೋಜನೆ ಅನುಷ್ಠಾನಕ್ಕೆ ತರುತ್ತಿದೆ. ಯೋಜನೆ ಮತ್ತು ಜನಸ್ನೇಹಿ ಆಡಳಿತ ಮೆಚ್ಚಿಕೊಂಡು ಮಹಿಳೆಯರು, ಹಿಂದುಳಿದ ವರ್ಗದವರು, ಅಲ್ಪಸಂಖ್ಯಾತರು ಬಿಜೆಪಿಗೆ ಬರುತ್ತಿದ್ದಾರೆ. ಮುಖ್ಯವಾಗಿ ಅಲ್ಪಸಂಖ್ಯಾತರು ನಾವೆಲ್ಲ ಭಾರತಾಂಬೆಯ ಮಕ್ಕಳು ಎನ್ನುವ ಬಿಜೆಪಿ ಸಿದ್ಧಾಂತ ಒಪ್ಪಿ ಪಕ್ಷಕ್ಕೆ ಬರುತ್ತಿರುವುದು ಗಮನಾರ್ಹ ಸಂಗತಿಯಾಗಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ನಗರ ಅಧ್ಯಕ್ಷ ಗಣೇಶಪ್ರಸಾದ್, ನಗರಸಭೆ ಅಧ್ಯಕ್ಷೆ ಮಧುರಾ ಶಿವಾನಂದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net