ದೇಶದಲ್ಲೇ ಮೊದಲನೇಯ ಫಲಿತಾಂಶ

DSC_0428--003
Published on

ಚಿತ್ರದುರ್ಗ:ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ದೇಶದಲ್ಲೇ ಮೊದಲನೇಯದ್ದಾಗಿ ಚಿತ್ರದುರ್ಗ ಎಸ್‌ಸಿ ಕ್ಷೇತ್ರದ ಫಲಿತಾಂಶ ಪ್ರಕಟ ವಾ ಗಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಸಮೀಪದ ಕಾಂಗ್ರೆಸ್ಸಿನ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರನ್ನು 48121 ಮತಗಳ ಅಂತರಿಂದ ಪರಾಜಿತಗೊಳಿಸಿದ್ದಾರೆ.
ಈ ಚುನಾವಣೆ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯನ್ನು ಎನ್‌ಕೋರ್(ENCORE)ತಂತ್ರಾಂಶದಲ್ಲಿ ಅಧೀಕೃತವಾಗಿ ಘೋಷಣೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು,ತಹಸೀಲ್ದಾರ್‌ಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ,ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ಅಭಿನಂದನೆ ಸಲ್ಲಿಸಿದ್ದಾರೆ.
ಯಾರಿಗೆ ಎಷ್ಟು ಮತ?
ವಿಜೇತ ಅಭ್ಯರ್ಥಿ ಬಿಜೆಪಿಯ ಗೋವಿಂದ ಕಾರಜೋಳ 684890,ಕಾಂಗ್ರೆಸ್ಸಿನ ಬಿ.ಎನ್.ಚಂದ್ರಪ್ಪ 6,36,769. ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ 7705, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು 4950, ಉತ್ತಮ ಪ್ರಜಾಕೀಯ ಪಾರ್ಟಿಯ ಟಿ.ರಮೇಶ್‌ನಾಯ್ಕ್ 2206, ಇಂಡಿಯನ್‌ಮೂವ್‌ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ 720, ಕರುನಾಡ ಸೇವಕರ ಪಾರ್ಟಿಯ ಶಬರೀಶ್ 1018, ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ 1014, ಪಕ್ಷೇತರ ಅಭ್ಯರ್ಥಿಗಳಾದ ಅಮೃತ್ ರಾಜ 834, ಗಣೇಶ 1093, ತುಳಸಿ ಹೆಚ್ 1082, ಡಾ.ಎಂ.ಪಿ.ದಾರಕೇಶ್ವರಯ್ಯ 1397, ನಾಗರಾಜಪ್ಪ 1679, ಭೂತರಾಜ್ ವಿ.ಎಸ್ 2397, ಮಂಜುನಾಥ ಸ್ವಾಮಿ ಟಿ 2676, ರಘುಕುಮಾರ್ ಎಸ್ 2337, ಬಿ.ವೆಂಕಟೇಶ ಶಿಲ್ಪಿ 4201, ಶ್ರೀನಿವಾಸಪುರದ ಶ್ರೀನಿವಾಸಬಾಬು ಪಾವಗಡ 4548, ಸುಧಾಕರ್ ಆರ್ 1211 ಮತ ಗಳಿಸಿದ್ದಾರೆ. ನೋಟಾಗೆ 3190 ಮತಗಳು ದಾಖಲಾಗಿವೆ. ಅಂಚೆ ಮತಗಳ ಪೈಕಿ 132 ತಿರಸ್ಕ7ತಗೊಂಡಿದ್ದು, 204 ಮತಗಳು ಅಮಾನ್ಯಗೊಂಡಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net