

ಬೆಳಗಾವಿ : ಕೆಎಲ್ಇ ಸಂಸ್ಥೆಯ ಬಿ.ಎಂ. ಕಂಕಣವಾಡಿ ಆಯುರ್ವೇದ ಫಾರ್ಮಾದಲ್ಲಿ 87 ವರ್ಷದಿಂದ ಆಯುರ್ವೇದ ಔಷಧ ಹಾಗೂ ಸಾಂಪ್ರದಾಯಿಕ ಆಯುರ್ವೇದ ಉತ್ಪನ್ನಗಳನ್ನು ತಯಾರಿಸುತ್ತಿದ್ದು, ಒಳ್ಳೆಯ ಗುಣಮಟ್ಟದ ಆಯುರ್ ಉತ್ಪನ್ನಗಳನ್ನು ಜನರಿಗೆ ತಲುಪಿಸಲು ಕ್ರಮಕೈಕೊಳ್ಳಲಾಗಿದೆ. ದೇಶಾದ್ಯಂತ ಕೆಎಲ್ಇ ಆಯುರ್ ಔಷಧಾಲಯಗಳನ್ನು ತೆರೆಯಲಾಗುತ್ತದೆ ಎಂದು ಕೆಎಲ್ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಹೇಳಿದರು.
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಆವರಣದಲ್ಲಿ ಕೆಎಲ್ಇ ಆಯುರ್ ಔಷಧಾಲಯ (ಆಯುರ್ವೇದಿಕ ಫಾರ್ಮಾಸಿ) ಶುಕ್ರವಾರ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಅಲೋಪಥಿಗೆ ಹೆಚ್ಚು ಪ್ರಾಮುಖ್ಯ ನೀಡಿ ಭಾರತೀಯ ಸಾಂಪ್ರಾದಾಯಿಕ ಔಷಧ ಪದ್ಧತಿ ನಾಶಪಡಿಸಿದ್ದೇವೆ. ಅದನ್ನು ಪುನರುಜ್ಜೀವನಗೊಳಿಸಬೇಕಾಗಿದೆ. ಅದಕ್ಕಾಗಿಯೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಯುಷ್ ಮಂತ್ರಾಲಯಕ್ಕೆ ಹೆಚ್ಚಿನ ಪ್ರಾಶಸ್ತ$್ಯ ನೀಡುತ್ತಿದ್ದಾರೆ. ಅಲೋಪಥಿಗೆ ಪರ್ಯಾಯವಾಗಿ ಹೊಮಿಯೋಪಥಿ ಬೆಳೆದಿದೆ. ಆದರೆ, ಆಯುರ್ವೇದ ಹಿಂದೆ ಬಿದ್ದಿದೆ. ಆದ್ದರಿಂದ ಆಯುರ್ವೇದಕ್ಕೆ ಹೆಚ್ಚಿನ ಪ್ರಾಶಸ್ತ$್ಯ ನೀಡುವುದಕ್ಕಾಗಿ ದೇಶದ್ಯಾಂತ ಕೆಎಲ್ಇ ಆಯುರ್ ಔಷಧಾಲಯ ತೆರೆಯಲಾಗುತ್ತಿದೆ ಎಂದರು.
1938ರಲ್ಲಿ ಪ್ರಾರಂಭಿಸಲಾದ ಆಯುರ್ವೇದ ಫಾರ್ಮಾಸಿಗಾಗಿ ಅವಶ್ಯವಿರುವ ಗಿಡಮೂಲಿಕೆಗಳನ್ನು ಬಂಬರಗಾ ಗ್ರಾಮದ ಸುಮಾರು 16 ಎಕರೆ ಪ್ರದೇಶದಲ್ಲಿ ಬೆಳೆಯಲಾಗುತ್ತಿದೆ. ಅದೇ ಪ್ರದೇಶದಲ್ಲಿ ಬೃಹತ್ತಾದ ಆಯುರ್ ಫಾರ್ಮಾ ಹಾಗೂ ಸಂಶೋಧನಾ ಕೇಂದ್ರ ತಲೆ ಎತ್ತಲಿದೆ. ಪಶ್ಚಿಮ ಟ್ಟದಲ್ಲಿ ಬಹಳಷ್ಟು ಆಯುರ್ವೇದಿಕ್ ಗಿಡಮೂಲಿಕೆಗಳಿದ್ದು, ಅವುಗಳ ಸಂಶೋಧನೆಗಾಗಿ ಕೆಎಲ್ಇ ಸಂಸ್ಥೆಯ ಬಿ.ಎಂ. ಕಂಕಣವಾಡಿ ಆಯುರ್ವೇದಿಕ್ ಮಹಾವಿದ್ಯಾಲಯ ಒಡಂಬಡಿಕೆ ಮಾಡಿಕೊಂಡಿದೆ. ಅದರೊಂದಿಗೆ ಜತೆಗೂಡಿ ಆಯುರ್ವೇದ ಅಭಿವೃದ್ಧಿ ಹಾಗೂ ಜನರಿಗೆ ತಲುಪಿಸುವ ಕಾರ್ಯ ಮಾಡಲಾಗುತ್ತದೆ. ನಮ್ಮ ಪಾರಂಪರಿಕ ಔಷಧ ಪದ್ಧ್ದತಿಗೂ ಕೂಡ ಮಹತ್ವ ನೀಡಬೇಕು ಎಂದರು.
ಬಿ.ಎಂ. ಕಂಕಣವಾಡಿ ಆಯುರ್ವೇದಿಕ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಸುಹಾಸಕುಮಾರ ಶೆಟ್ಟಿ ಮಾತನಾಡಿ, ಕೆಎಲ್ಇ ಆಯುರ್ ಫಾರ್ಮಾದಲ್ಲಿ 326 ಬಗೆಯ ಔಷಧ ತಯಾರಿಸುತ್ತಿದ್ದು, ಅದರಲ್ಲಿ 26 ಸಾಂಪ್ರದಾಯಿಕ ರೋಗ ತಡೆಗಟ್ಟುವ ಆಯುರ್ವೇದ ಪದ್ಧತಿ ಉತ್ಪನ್ನಗಳನ್ನು ತಯಾರಿಸಲಾಗುತ್ತದೆ. ಉತ್ಪನ್ನಗಳನ್ನು ಮಾರಲು ಮೊದಲು ಆಯುಷ್ ಪ್ರಮಾಣೀಕೃತ ಪ್ರಯೋಗಾಲಯದಲ್ಲಿ ಪರೀೆಗೊಳಪಡಿಸಲಾಗುತ್ತದೆ. ಉತ್ತಮ ಗುಣಮಟ್ಟ ಮತ್ತು ಪರಿಣಾಮಕಾರಿ ಖಾತ್ರಿಪಡಿಸಿ ಅದನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಗುತ್ತದೆ. ಹರ್ಬಲ್ ಚಹಾ (ಟೀ) ಚವನಪ್ರಾಶ, ಸುವರ್ಣಬಿಂದು ಪ್ರಾಶಣ, ಕಾಸ್ಟ್ಟ್ಧೂಪ, ಹಲ್ಲಿನ ಪುಡಿ, ಭೃಂಗರಾಜ ಎಣ್ಣೆ, ದುಗ್ದವರ್ಧಿನಿ ಸೇರಿ ಅನೇಕ ಆಯುರ್ವೇದ ಔಷಧ ಮಾರುಕಟ್ಟೆಯಲ್ಲಿ ಲಭ್ಯ ಇವೆ ಎಂದರು.
ಆಸ್ಪತ್ರೆ ವೈದ್ಯಕಿಯ ನಿರ್ದೇಶಕ ಡಾ. ಎಂ.ವಿ. ಜಾಲಿ, ಎಚ್.ಬಿ. ರಾಜಶೇಖರ, ಡಾ. ವಿ.ಡಿ. ಪಾಟೀಲ, ಡಾ. ಎನ್.ಎಸ್. ಮಹಾಂತಶೆಟ್ಟಿ, ಡಾ. ಆರೀಫ್ ಮಾಲ್ದಾರ, ಡಾ. ಸುನೀಲ ಜಲಾಲಪುರೆ, ಡಾ. ಪಿ.ಜಿ. ಜಾಡರ, ಡಾ. ಸವಿತಾ ಭೊಸಲೆ ಇತರರಿದ್ದರು.